Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 123 - ಪರಿಶುದ್ದ ಬೈಬಲ್‌


ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.

1 ಪರಲೋಕದಲ್ಲಿ ಸಿಂಹಾಸನಾರೂಢನಾಗಿರುವಾತನೇ, ನಿನ್ನ ಕಡೆಗೆ ಕಣ್ಣೆತ್ತಿ ನೋಡುತ್ತಾ ಪ್ರಾರ್ಥಿಸುವೆನು.

2 ಸೇವಕರು ತಮಗೆ ಬೇಕಾದವುಗಳಿಗಾಗಿ ತಮ್ಮ ಯಜಮಾನರನ್ನು ಅವಲಂಬಿಸಿಕೊಳ್ಳುವರು; ಸೇವಕಿಯರು ತಮ್ಮ ಯಜಮಾನಿಯರನ್ನು ಅವಲಂಬಿಸಿಕೊಳ್ಳುವರು. ಅಂತೆಯೇ, ನಾವು ನಮ್ಮ ದೇವರಾದ ಯೆಹೋವನನ್ನು ಅವಲಂಬಿಸಿಕೊಳ್ಳುವೆವು. ಆತನ ಕರುಣೆಯನ್ನೇ ನಿರೀಕ್ಷಿಸುವೆವು.

3 ಯೆಹೋವನೇ, ನಮಗೆ ಕರುಣೆತೋರು, ಬಹುಕಾಲದಿಂದ ನಾವು ಅವಮಾನಿತರಾಗಿದ್ದೇವೆ.

4 ಗರ್ವಿಷ್ಠರೂ ಮೊಂಡರೂ ನಮ್ಮನ್ನು ಸಾಕಷ್ಟು ಗೇಲಿ ಮಾಡಿದ್ದಾರೆ.

Kannada Holy Bible: Easy-to-Read Version

All rights reserved.

© 1997 Bible League International

Bible League International
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು