Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 124 - ಪರಿಶುದ್ದ ಬೈಬಲ್‌


ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ರಚನೆಗಾರ: ದಾವೀದ.

1 ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು? ಇಸ್ರೇಲರೇ, ನನಗೆ ಉತ್ತರಹೇಳಿ.

2 ವೈರಿಗಳು ನಮ್ಮ ಮೇಲೆ ಆಕ್ರಮಣ ಮಾಡಿದಾಗ ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?

3 ಶತ್ರುಗಳು ನಮ್ಮಮೇಲೆ ಕೋಪಗೊಂಡಾಗಲೆಲ್ಲಾ ನಮ್ಮನ್ನು ಜೀವಂತವಾಗಿ ನುಂಗಿಬಿಡುತ್ತಿದ್ದರು.

4 ಶತ್ರುಸೈನ್ಯಗಳು ನಮ್ಮನ್ನು ಕೊಚ್ಚಿಕೊಂಡು ಹೋಗುವ ಪ್ರವಾಹದಂತೆಯೂ ಮುಳುಗಿಸುವ ನದಿಯಂತೆಯೂ ಆಗಿರುತ್ತಿದ್ದರು.

5 ಆ ಗರ್ವಿಷ್ಠರು ನಮ್ಮ ಪಾಲಿಗೆ ಬಾಯಿಯವರೆಗೂ ಮೇಲೇರಿ ಮುಳುಗಿಸುವ ನೀರಿನಂತಾಗುತ್ತಿದ್ದರು.

6 ಯೆಹೋವನಿಗೆ ಸ್ತೋತ್ರವಾಗಲಿ! ನಮ್ಮ ಶತ್ರುಗಳು ನಮ್ಮನ್ನು ಹಿಡಿದು ಕೊಲ್ಲಲು ಆತನು ಅವಕಾಶ ಕೊಡಲಿಲ್ಲ.

7 ನಾವು ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದ್ದೇವೆ. ಬಲೆಯು ಹರಿದುಹೋದದ್ದರಿಂದ ನಾವು ತಪ್ಪಿಸಿಕೊಂಡೆವು.

8 ನಮಗೆ ಸಹಾಯವು ಯೆಹೋವನಿಂದಲೇ ಬಂದಿತು. ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿದವನು ಆತನೇ.

Kannada Holy Bible: Easy-to-Read Version

All rights reserved.

© 1997 Bible League International

Bible League International
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು