Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 125 - ಪರಿಶುದ್ದ ಬೈಬಲ್‌


ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.

1 ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು.

2 ಪರ್ವತಗಳು ಜೆರುಸಲೇಮಿನ ಸುತ್ತಲೂ ಇವೆ. ಯೆಹೋವನು ತನ್ನ ಜನರ ಸುತ್ತಲೂ ಇರುವನು. ಆತನು ತನ್ನ ಜನರನ್ನು ಸದಾಕಾಲ ಸಂರಕ್ಷಿಸುವನು.

3 ದುಷ್ಟರು ನೀತಿವಂತರನ್ನು ಶಾಶ್ವತವಾಗಿ ಆಳುವುದಿಲ್ಲ. ಅವರು ಶಾಶ್ವತವಾಗಿ ಆಳಿದರೆ ನೀತಿವಂತರೂ ದುಷ್ಕೃತ್ಯಗಳನ್ನು ಮಾಡತೊಡಗಬಹುದು.

4 ಯೆಹೋವನೇ, ನೀತಿವಂತರಿಗೂ ಯಥಾರ್ಥವಂತರಿಗೂ ಉಪಕಾರಮಾಡು.

5 ದುಷ್ಟರು ಕುತಂತ್ರಗಳನ್ನು ಮಾಡುವರು. ಯೆಹೋವನು ಅವರನ್ನು ದಂಡಿಸುವನು. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.

Kannada Holy Bible: Easy-to-Read Version

All rights reserved.

© 1997 Bible League International

Bible League International
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು