Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 126 - ಪರಿಶುದ್ದ ಬೈಬಲ್‌


ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.

1 ಯೆಹೋವನು ನಮ್ಮನ್ನು ಸೆರೆಯಿಂದ ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸು ಕಂಡವರಂತಿದ್ದೆವು!

2 ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು. “ಯೆಹೋವನು ಇಸ್ರೇಲರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ಅನ್ಯ ಜನಾಂಗಗಳು ಮಾತಾಡಿಕೊಂಡರು.

3 ಹೌದು, ನಾವು ಸಂತೋಷದಿಂದ್ದೇವೆ ಯಾಕೆಂದರೆ ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದನು.

4 ಯೆಹೋವನೇ, ಬತ್ತಿಹೋದ ತೊರೆಗಳು ನೀರಿನಿಂದ ಮತ್ತೆ ತುಂಬಿ ಹರಿಯುವಂತೆ ನಮ್ಮನ್ನು ಬಿಡಿಸು.

5 ಅಳುತ್ತಾ ಬೀಜವನ್ನು ಬಿತ್ತುವವನು ಹರ್ಷದಿಂದ ಕೊಯ್ಯುವನು.

6 ಅಳುತ್ತಾ ಹೊಲಕ್ಕೆ ಬೀಜವನ್ನು ಹೊತ್ತುಕೊಂಡು ಹೋಗುವವನು ಹರ್ಷದಿಂದ ಸಿವುಡುಗಳನ್ನು ಹೊತ್ತುಕೊಂಡು ಬರುವನು!

Kannada Holy Bible: Easy-to-Read Version

All rights reserved.

© 1997 Bible League International

Bible League International
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು