Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 129 - ಪರಿಶುದ್ದ ಬೈಬಲ್‌


ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.

1 ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಇಸ್ರೇಲೇ, ಆ ಶತ್ರುಗಳ ಬಗ್ಗೆ ನಮಗೆ ಹೇಳು.

2 ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಆದರೆ ಅವರೆಂದೂ ಗೆಲ್ಲಲಿಲ್ಲ.

3 ನನ್ನ ಬೆನ್ನಿನ ಮೇಲೆ ಹೊಡೆದು ಹೊಲವನ್ನು ಉಳುವಂತೆ ಗಾಯ ಮಾಡಿದರು.

4 ಆದರೆ ನೀತಿಸ್ವರೂಪನಾದ ಯೆಹೋವನು ಹಗ್ಗಗಳನ್ನು ಕತ್ತರಿಸಿ ಆ ದುಷ್ಟರಿಂದ ನನ್ನನ್ನು ಬಿಡುಗಡೆ ಮಾಡಿದನು.

5 ಚೀಯೋನನ್ನು ದ್ವೇಷಿಸಿದ ಜನರು ಸೋತುಹೋದರು. ಅವರು ಹೋರಾಟವನ್ನು ನಿಲ್ಲಿಸಿ ಓಡಿಹೋದರು.

6 ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದರು. ಅದು ಬೆಳೆಯುವುದಕ್ಕಿಂತ ಮೊದಲೇ ಒಣಗಿಹೋಗುವುದು.

7 ಅದನ್ನು ಕೊಯ್ಯುವವನ ಹಿಡಿಯೂ ತುಂಬುವುದಿಲ್ಲ ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.

8 ಅವರ ಸಮೀಪದಲ್ಲಿ ನಡೆದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ” ಎಂದು ಹೇಳುವುದಿಲ್ಲ. “ಯೆಹೋವನ ಹೆಸರಿನಲ್ಲಿ ನಿಮಗೆ ಆಶೀರ್ವಾದವಾಗಲಿ” ಎಂದು ಜನರು ಅವರನ್ನು ಆಶೀರ್ವದಿಸುವುದಿಲ್ಲ.

Kannada Holy Bible: Easy-to-Read Version

All rights reserved.

© 1997 Bible League International

Bible League International
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು