Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 130 - ಪರಿಶುದ್ದ ಬೈಬಲ್‌


ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.

1 ಯೆಹೋವನೇ, ಮಹಾ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದೇನೆ; ಸಹಾಯಕ್ಕಾಗಿ ನಿನ್ನನ್ನೇ ಕೂಗಿಕೊಳ್ಳುತ್ತಿದ್ದೇನೆ.

2 ನನ್ನ ಒಡೆಯನೇ, ನನಗೆ ಕಿವಿಗೊಡು. ನನ್ನ ಮೊರೆಯನ್ನು ಆಲಿಸು.

3 ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ ಒಬ್ಬನೂ ಜೀವಂತವಾಗಿ ಉಳಿಯಲಾರ.

4 ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು.

5 ನಾನು ಯೆಹೋವನ ಸಹಾಯಕ್ಕಾಗಿ ಕಾಯುತ್ತಿದ್ದೇನೆ. ನನ್ನ ಪ್ರಾಣವು ಆತನಿಗಾಗಿ ಕಾದುಕೊಂಡಿರುವುದು. ಆತನು ನುಡಿಯನ್ನು ನಂಬಿಕೊಂಡಿದ್ದೇನೆ.

6 ನಾನು ನನ್ನ ಒಡೆಯನಿಗಾಗಿ ಮುಂಜಾನೆಗೋಸ್ಕರ ಎದುರುನೋಡುತ್ತಿರುವ ಕಾವಲುಗಾರರಂತೆ ನಿರೀಕ್ಷಿಸುತ್ತಿದ್ದೇನೆ.

7 ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು.

8 ಆತನೇ ಇಸ್ರೇಲರ ಎಲ್ಲಾ ಪಾಪಗಳನ್ನು ಕ್ಷಮಿಸುವನು.

Kannada Holy Bible: Easy-to-Read Version

All rights reserved.

© 1997 Bible League International

Bible League International
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು