Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 131 - ಪರಿಶುದ್ದ ಬೈಬಲ್‌


ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.

1 ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ. ನನ್ನ ಕಣ್ಣುಗಳಲ್ಲಿ ಸೊಕ್ಕಿಲ್ಲ. ಮಹಾಕಾರ್ಯಗಳನ್ನಾಗಲಿ ಅಸಾಧ್ಯ ಕಾರ್ಯಗಳನ್ನಾಗಲಿ ಮಾಡಲು ನಾನು ಪ್ರಯತ್ನಿಸುವುದಿಲ್ಲ.

2 ನಾನು ಸಮಾಧಾನದಿಂದಿರುವೆ. ನನ್ನ ಆತ್ಮವು ನೆಮ್ಮದಿಯಿಂದಿದೆ. ತನ್ನ ತಾಯಿಯ ತೋಳುಗಳಲ್ಲಿ ಸಂತೃಪ್ತಿಯಾಗಿರುವ ಮಗುವಿನಂತೆ ನನ್ನ ಆತ್ಮವು ಸಮಾಧಾನದಿಂದಲೂ ನೆಮ್ಮದಿಯಿಂದಲೂ ಇದೆ.

3 ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. ಈಗಲೂ ಆತನಲ್ಲಿ ಭರವಸವಿಡು. ಎಂದೆಂದಿಗೂ ಆತನಲ್ಲಿ ಭರವಸವಿಡು!

Kannada Holy Bible: Easy-to-Read Version

All rights reserved.

© 1997 Bible League International

Bible League International
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು