Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 14 - ಪರಿಶುದ್ದ ಬೈಬಲ್‌


ರಚನೆಗಾರ: ದಾವೀದ.

1 ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.

2 ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.

3 ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ. ಎಲ್ಲರೂ ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.

4 ದುಷ್ಟರು ಅರ್ಥಮಾಡಿಕೊಳ್ಳುವುದಿಲ್ಲವೇ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.

5-6 ಬಡವರ ಬುದ್ಧಿಮಾತನ್ನು ಆ ದುಷ್ಟರು ಕೇಳುವುದಿಲ್ಲ. ಯಾಕೆಂದರೆ ಬಡವರು ಆಶ್ರಯಿಸಿಕೊಂಡಿರುವುದು ಯೆಹೋವನನ್ನೇ. ಆದರೆ ದೇವರು ನೀತಿವಂತರೊಂದಿಗಿದ್ದಾನೆ. ಆದ್ದರಿಂದ ದುಷ್ಟರು ಭಯಭ್ರಾಂತರಾಗುವರು.

7 ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ? ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ. ಯೆಹೋವನಾದರೋ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು; ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.

Kannada Holy Bible: Easy-to-Read Version

All rights reserved.

© 1997 Bible League International

Bible League International
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು