ಕೀರ್ತನೆಗಳು 149 - ಪರಿಶುದ್ದ ಬೈಬಲ್1 ಯೆಹೋವನಿಗೆ ಸ್ತೋತ್ರವಾಗಲಿ. ಯೆಹೋವನ ಹೊಸ ಕಾರ್ಯಗಳಿಗಾಗಿ ಆತನಿಗೆ ಹೊಸ ಹಾಡನ್ನು ಹಾಡಿರಿ! ಆತನ ಭಕ್ತರ ಸಭೆಯಲ್ಲಿ ಆತನನ್ನು ಸಂಕೀರ್ತಿಸಿರಿ. 2 ಇಸ್ರೇಲರು ತಮ್ಮ ಸೃಷ್ಟಿಕರ್ತನಲ್ಲಿ ಉಲ್ಲಾಸಿಸಲಿ! ಚೀಯೋನಿನ ಜನರು ತಮ್ಮ ರಾಜನಲ್ಲಿ ಹರ್ಷಿಸಲಿ. 3 ಅವರು ನೃತ್ಯಮಾಡುತ್ತಾ ಝಲ್ಲರಿಗಳನ್ನು ಬಡಿಯುತ್ತಾ ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸ್ತುತಿಸಲಿ. 4 ಯೆಹೋವನು ತನ್ನ ಜನರಲ್ಲಿ ಸಂತೋಷಿಸುವನು. ಆತನು ತನ್ನ ದೀನಜನರಿಗಾಗಿ ಅದ್ಭುತಕಾರ್ಯವನ್ನು ಮಾಡಿ ಅವರನ್ನು ರಕ್ಷಿಸಿದನು! 5 ಆತನ ಭಕ್ತರೇ, ನಿಮ್ಮ ವಿಜಯದಲ್ಲಿ ಉಲ್ಲಾಸಿಸಿರಿ! ಹಾಸಿಗೆಯ ಮೇಲಿರುವಾಗಲೂ ಸಂತೋಷದಿಂದಿರಿ. 6 ಜನರು ಆತನಿಗೆ ಗಟ್ಟಿಯಾಗಿ ಸ್ತೋತ್ರಮಾಡುತ್ತಾ ತಮ್ಮ ಇಬ್ಭಾಯಿ ಕತ್ತಿಗಳನ್ನು ಕೈಗಳಲ್ಲಿ ತೆಗೆದುಕೊಳ್ಳಲಿ. 7 ಅವರು ಹೋಗಿ ತಮ್ಮ ಶತ್ರುಗಳನ್ನು ದಂಡಿಸಲಿ; ಅನ್ಯ ಜನರನ್ನು ದಂಡಿಸಲಿ. 8 ದೇವಜನರು ಆ ರಾಜರುಗಳನ್ನು ಮತ್ತು ಪ್ರಮುಖರನ್ನು ಸರಪಣಿಗಳಿಂದಲೂ ಕಬ್ಬಿಣದ ಬೇಡಿಗಳಿಂದಲೂ ಬಂಧಿಸುವರು. 9 ಆತನ ಆಜ್ಞೆಗನುಸಾರವಾಗಿ ಆತನ ಭಕ್ತರು ತಮ್ಮ ಶತ್ರಗಳನ್ನು ದಂಡಿಸುವರು. ಆತನು ತನ್ನ ಭಕ್ತರಿಗೆ ಒಳ್ಳೆಯವನಾಗಿದ್ದಾನೆ. ಯೆಹೋವನಿಗೆ ಸ್ತೋತ್ರವಾಗಲಿ. |
Kannada Holy Bible: Easy-to-Read Version
All rights reserved.
© 1997 Bible League International
Bible League International