ಕೀರ್ತನೆಗಳು 23 - ಪರಿಶುದ್ದ ಬೈಬಲ್ರಚನೆಗಾರ: ದಾವೀದ. 1 ಯೆಹೋವನೇ ನನಗೆ ಕುರುಬನು. ನನಗೆ ಕೊರತೆಯೇ ಇಲ್ಲ. 2 ಆತನು ನನ್ನನ್ನು ಹಸಿರುಗಾವಲುಗಳಲ್ಲಿ ತಂಗಿಸುವನು. ಪ್ರಶಾಂತವಾದ ನೀರಿನ ತೊರೆಗಳ ಬಳಿಯಲ್ಲಿ ನನ್ನನ್ನು ನಡೆಸುವನು. 3 ಆತನು ತನ್ನ ಹೆಸರಿಗೆ ತಕ್ಕಂತೆ ನನ್ನ ಪ್ರಾಣಕ್ಕೆ ಚೈತನ್ಯ ನೀಡಿ ನೀತಿಮಾರ್ಗದಲ್ಲಿ ನನ್ನನ್ನು ನಡೆಸುವನು. 4 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ನನ್ನೊಂದಿಗಿರುವುದರಿಂದ ಭಯಪಡುವುದಿಲ್ಲ. ನಿನ್ನ ದೊಣ್ಣೆಯೂ ಊರುಗೋಲೂ ನನ್ನನ್ನು ಸಂತೈಸುತ್ತವೆ. 5 ವೈರಿಗಳ ಎದುರಿನಲ್ಲಿ ನೀನು ನನಗೆ ಔತಣವನ್ನು ಸಿದ್ಧಪಡಿಸಿರುವೆ; ನನ್ನ ತಲೆಗೆ ಎಣ್ಣೆಯನ್ನು ಹಚ್ಚಿರುವೆ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತಿದೆ. 6 ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಕೃಪೆಯೂ ನನ್ನೊಂದಿಗಿರುತ್ತವೆ. ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲೇ ವಾಸಿಸುವೆನು. |
Kannada Holy Bible: Easy-to-Read Version
All rights reserved.
© 1997 Bible League International
Bible League International