Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 54 - ಪರಿಶುದ್ದ ಬೈಬಲ್‌


ಜಿಫೆಂಬ ಸ್ಥಳದವರು ಸೌಲನ ಬಳಿಗೆ ಹೋಗಿ, “ದಾವೀದನು ನಮ್ಮಲ್ಲಿ ಅಡಗಿಕೊಂಡಿದ್ದಾನೆ” ಎಂದು ತಿಳಿಸಿದಾಗ ರಚಿಸಲ್ಪಟ್ಟ ಕೀರ್ತನೆಯಿದು. ರಚನೆಗಾರ: ದಾವೀದ.

1 ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸು! ನಿನ್ನ ಮಹಾಶಕ್ತಿಯಿಂದ ನನ್ನ ನ್ಯಾಯವನ್ನು ಸ್ಥಾಪಿಸು.

2 ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮಾತುಗಳನ್ನು ಕೇಳು.

3 ದೇವರ ಕುರಿತು ಆಲೋಚಿಸದ ಅನ್ಯರು ನನಗೆ ವಿರೋಧವಾಗಿ ತಿರುಗಿದ್ದಾರೆ. ಆ ಬಲಾತ್ಕಾರಿಗಳು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ.

4 ಇಗೋ, ನನ್ನ ದೇವರೇ ನನಗೆ ಸಹಾಯಮಾಡುವನು. ನನ್ನ ಒಡಯನೇ ನನಗೆ ಆಧಾರ ನೀಡುವನು.

5 ನನಗೆ ವಿರೋಧವಾಗಿ ತಿರುಗಿರುವ ಜನರನ್ನು ನನ್ನ ದೇವರು ದಂಡಿಸುವನು. ದೇವರು ನನಗೆ ನಂಬಿಗಸ್ತನಾಗಿದ್ದಾನೆ. ಆತನು ಅವರನ್ನು ನಾಶಮಾಡುವನು.

6 ದೇವರೇ, ನಾನು ನಿನಗೆ ಸ್ವಇಚ್ಛೆಯಿಂದ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನೇ, ನಿನ್ನ ಒಳ್ಳೆಯ ಹೆಸರನ್ನು ನಾನು ಕೊಂಡಾಡುವೆನು.

7 ಯಾಕೆಂದರೆ ನನ್ನೆಲ್ಲಾ ಆಪತ್ತುಗಳಿಂದ ರಕ್ಷಿಸಿದಾತನು ನೀನೇ. ನನ್ನ ವೈರಿಗಳಿಗಾದ ಸೋಲನ್ನು ನಾನು ಕಣ್ಣಾರೆ ಕಂಡೆನು.

Kannada Holy Bible: Easy-to-Read Version

All rights reserved.

© 1997 Bible League International

Bible League International
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು