Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 56 - ಪರಿಶುದ್ದ ಬೈಬಲ್‌


ಗತ್ ಎಂಬ ಊರಲ್ಲಿ ಫಿಲಿಷ್ಟಿಯರು ಸೆರೆಹಿಡಿದಾಗ ರಚಿಸಿಲ್ಪಟ್ಟಿತು. ರಚನೆಗಾರ: ದಾವೀದ.

1 ದೇವರೇ, ನನ್ನನ್ನು ಕರುಣಿಸು; ವೈರಿಗಳು ನನ್ನ ಮೇಲೆ ಆಕ್ರಮಣಮಾಡಿದ್ದಾರೆ. ಅವರು ಸತತವಾಗಿ ನನ್ನನ್ನು ಬೆನ್ನಟ್ಟಿ ಹೋರಾಡುತ್ತಿದ್ದಾರೆ.

2 ನನ್ನ ವೈರಿಗಳು ಸತತವಾಗಿ ನನ್ನ ಮೇಲೆ ಆಕ್ರಮಣ ಮಾಡುವರು. ಅವರಲ್ಲಿರುವ ಹೋರಾಟಗಾರರು ಅಸಂಖ್ಯಾತ.

3 ನಾನು ಭಯಗೊಂಡಾಗ, ನಿನ್ನಲ್ಲೇ ಭರವಸೆ ಇಡುವೆ.

4 ನಾನು ದೇವರಲ್ಲಿ ಭರವಸೆ ಇಟ್ಟಿರುವುದರಿಂದ ಜನರಿಗೆ ಭಯಪಡುವುದಿಲ್ಲ. ಕ್ಷಣಿಕರಾದ ಮಾನವರು ನನಗೇನು ಮಾಡಬಲ್ಲರು? ದೇವರ ವಾಗ್ದಾನಕ್ಕಾಗಿ ಆತನನ್ನು ಕೊಂಡಾಡುವೆನು.

5 ನನ್ನ ವೈರಿಗಳು ನನ್ನ ಮಾತುಗಳಿಗೆ ಅಪಾರ್ಥ ಮಾಡುವರು. ನನಗೆ ಕೇಡುಮಾಡಬೇಕೆಂದೇ ಅವರು ಯಾವಾಗಲೂ ಯೋಚಿಸುವರು.

6 ಅವರು ಒಟ್ಟುಗೂಡಿ ನನ್ನನ್ನು ಕೊಲ್ಲಲು ನನ್ನ ಹೆಜ್ಜೆಯನ್ನೇ ಹಿಂಬಾಲಿಸಿಕೊಂಡು ಬರುತ್ತಾರೆ.

7 ದೇವರೇ, ಅವರ ದುಷ್ಟತನದ ನಿಮಿತ್ತ ಅವರನ್ನು ಸೆರೆಯಾಳುಗಳಾಗಿ ಕಳುಹಿಸು. ಅವರು ಅನ್ಯ ಜನಾಂಗಗಳ ಕೋಪವನ್ನು ಅನುಭವಿಸುವಂತೆ ಹೊರಗಟ್ಟು.

8 ನನಗಾಗಿರುವ ದುಃಖವು ನಿನಗೆ ಗೊತ್ತಿದೆ. ನಾನು ಎಷ್ಚು ಅತ್ತಿರುವೆನೆಂದು ನಿನಗೆ ಗೊತ್ತಿದೆ. ನನ್ನ ಕಣ್ಣೀರಿಗೆ ನೀನು ಖಂಡಿತವಾಗಿ ಲೆಕ್ಕವಿಟ್ಟಿರುವೆ.

9 ಆದ್ದರಿಂದ, ಸಹಾಯಕ್ಕಾಗಿ ನಾನು ನಿನಗೆ ಮೊರೆಯಿಡುವಾಗ ನನ್ನ ಶತ್ರುಗಳನ್ನು ಸೋಲಿಸು. ನೀನು ಮಾಡಬಲ್ಲೆ ಎಂದು ನನಗೆ ಗೊತ್ತಿದೆ; ನೀನೇ ದೇವರು!

10 ನಾನು ದೇವರನ್ನು ಆತನ ವಾಗ್ದಾನಕ್ಕಾಗಿ ಕೊಂಡಾಡುವೆನು. ಯೆಹೋವನು ನನಗೆ ಮಾಡಿರುವ ವಾಗ್ದಾನಕ್ಕಾಗಿ ನಾನು ಆತನನ್ನು ಕೊಂಡಾಡುವೆನು.

11 ನಾನು ದೇವರಲ್ಲಿ ಭರವಸವಿಟ್ಟಿರುವುದರಿಂದ ಜನರಿಗೆ ಭಯಪಡುವುದಿಲ್ಲ. ಕ್ಷಣಿಕರಾದ ಮಾನವರು ನನಗೇನು ಮಾಡಬಲ್ಲರು?

12 ದೇವರೇ, ನಾನು ನಿನಗೆ ವಿಶೇಷ ಹರಕೆಗಳನ್ನು ಮಾಡಿದ್ದೇನೆ. ನಾನು ಮಾಡಿದ ಹರಕೆಗಳನ್ನು ಸಲ್ಲಿಸುವೆನು. ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು.

13 ಯಾಕೆಂದರೆ ನೀನು ನನ್ನನ್ನು ಮರಣದಿಂದ ರಕ್ಷಿಸಿದೆ; ನೀನು ನನ್ನನ್ನು ಸೋಲಿನಿಂದ ತಪ್ಪಿಸಿದೆ. ಆದ್ದರಿಂದ, ಜೀವಂತರಾಗಿರುವ ಜನರು ಮಾತ್ರ ನೋಡಬಹುದಾದ ಬೆಳಕಿನಲ್ಲಿ ನಾನು ದೇವರನ್ನು ಆರಾಧಿಸುವೆನು.

Kannada Holy Bible: Easy-to-Read Version

All rights reserved.

© 1997 Bible League International

Bible League International
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು