Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 67 - ಪರಿಶುದ್ದ ಬೈಬಲ್‌


ಸ್ತುತಿಗೀತೆ.

1 ದೇವರೇ, ನನ್ನನ್ನು ಕರುಣಿಸಿ ಆಶೀರ್ವದಿಸು. ಪ್ರಸನ್ನಮುಖದಿಂದ ನಮ್ಮನ್ನು ನೋಡು.

2 ದೇವರೇ, ಸರ್ವಭೂನಿವಾಸಿಗಳು ನಿನ್ನನ್ನು ತಿಳಿದುಕೊಳ್ಳಲಿ. ಜನರಿಗೆ ನಿನ್ನಿಂದಾಗುವ ರಕ್ಷಣೆಯನ್ನು ಸರ್ವಜನಾಂಗಗಳೂ ಕಾಣಲಿ.

3 ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ! ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ!

4 ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.

5 ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ! ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ!

6 ದೇವರೇ, ನಮ್ಮ ದೇವರೇ, ನಮ್ಮನ್ನು ಆಶೀರ್ವದಿಸು. ನಮ್ಮ ಭೂಮಿಯು ಮಹಾಸುಗ್ಗಿಯನ್ನು ಕೊಡಲಿ.

7 ಆತನು ನಮ್ಮನ್ನು ಆಶೀರ್ವದಿಸಲಿ. ಸರ್ವಭೂನಿವಾಸಿಗಳೆಲ್ಲರೂ ಆತನಲ್ಲಿ ಭಯಭಕ್ತಿವುಳ್ಳವರಾಗಲಿ.

Kannada Holy Bible: Easy-to-Read Version

All rights reserved.

© 1997 Bible League International

Bible League International
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು