Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 82 - ಪರಿಶುದ್ದ ಬೈಬಲ್‌


ಸ್ತುತಿಗೀತೆ. ರಚನೆಗಾರ: ಆಸಾಫ.

1 ದೇವಾದಿದೇವನು ತನ್ನ ಸಭೆಯಲ್ಲಿ ನಿಂತುಕೊಂಡು ದೇವರುಗಳಿಗೆ ನ್ಯಾಯತೀರ್ಪು ನೀಡುವನು.

2 ದೇವರು ಹೀಗೆನ್ನುತ್ತಾನೆ: “ಇನ್ನೆಷ್ಟರವರೆಗೆ ಅನ್ಯಾಯವಾಗಿ ತೀರ್ಪು ಕೊಡುತ್ತೀರಿ? ಇನ್ನೆಷ್ಟರವರೆಗೆ ದುಷ್ಟರನ್ನು ದಂಡಿಸದೆ ಬಿಡುಗಡೆ ಮಾಡುತ್ತೀರಿ?”

3 “ಅನಾಥರ ಮತ್ತು ಬಡಜನರ ಪರವಾಗಿ ವಾದಿಸಿರಿ. ಅನ್ಯಾಯಕ್ಕೆ ಒಳಗಾಗಿರುವ ಬಡವರ ಹಕ್ಕುಗಳನ್ನು ಸಂರಕ್ಷಿಸಿರಿ.

4 ಬಡವರಿಗೆ ಮತ್ತು ಅಸಹಾಯಕರಿಗೆ ಸಹಾಯ ಮಾಡಿರಿ. ಅವರನ್ನು ದುಷ್ಟರಿಂದ ರಕ್ಷಿಸಿರಿ.

5 “ಅವರಿಗೆ ಏನೂ ಗೊತ್ತಿಲ್ಲ. ಅವರಿಗೆ ಏನೂ ಅರ್ಥವಾಗುವುದಿಲ್ಲ! ತಾವು ಮಾಡುತ್ತಿರುವುದೂ ಅವರಿಗೆ ತಿಳಿಯದು. ಅವರ ಪ್ರಪಂಚವು ಅವರ ಸುತ್ತಲೂ ಕುಸಿದುಬೀಳುತ್ತಿದೆ!”

6 ನಾಯಕರಾದ ನಿಮಗೆ ನಾನು ಹೇಳುವುದೇನೆಂದರೆ: “ನೀವು ದೇವರುಗಳು. ನೀವು ಮಹೋನ್ನತನಾದ ದೇವರ ಪುತ್ರರು.

7 ಆದರೆ ಎಲ್ಲಾ ಜನರಂತೆ ನೀವೂ ಸಾಯುವಿರಿ. ಬೇರೆಲ್ಲಾ ನಾಯಕರುಗಳಂತೆಯೇ ನೀವು ಸಾಯುವಿರಿ.”

8 ದೇವರೇ ಎದ್ದೇಳು! ನೀನೇ ನ್ಯಾಯಾಧೀಶನಾಗಿರು! ಎಲ್ಲಾ ಜನಾಂಗಗಳಿಗೆ ನೀನೇ ನಾಯಕನಾಗಿರು!

Kannada Holy Bible: Easy-to-Read Version

All rights reserved.

© 1997 Bible League International

Bible League International
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು