Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಯೆಶಾಯ 12 - ಪರಿಶುದ್ದ ಬೈಬಲ್‌


ದೇವರಿಗೆ ಸ್ತೋತ್ರದ ಹಾಡು

1 ಆ ಸಮಯದಲ್ಲಿ ನೀನು ಹೀಗೆನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.

2 ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”

3 ರಕ್ಷಣೆಯೆಂಬ ಬುಗ್ಗೆಯಿಂದ ನೀರನ್ನು ತೆಗೆದುಕೊ. ಆಗ ನೀನು ಸಂತೋಷಗೊಳ್ಳುವೆ.

4 ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನ ಹೆಸರಿನ ಮಹತ್ವವನ್ನು ವರ್ಣಿಸಿರಿ! ಆತನು ಜನಾಂಗಗಳಲ್ಲಿ ಮಾಡಿದ ಕಾರ್ಯಗಳನ್ನು ಸಾರಿರಿ. ಆತನ ಹೆಸರು ಮಹೋನ್ನತವೆಂದು ಜ್ಞಾಪಕಪಡಿಸಿರಿ!” ಎಂದು ಹೇಳುವೆ.

5 ಯೆಹೋವನಿಗೆ ಸ್ತೋತ್ರಗಾನ ಹಾಡಿರಿ. ಯಾಕೆಂದರೆ ಆತನು ಮಹಾಕಾರ್ಯಗಳನ್ನು ನಡೆಸಿದ್ದಾನೆ. ದೇವರ ಬಗ್ಗೆ ಎಲ್ಲರಿಗೂ ಪ್ರಕಟಿಸಿರಿ. ಇಡೀ ಲೋಕಕ್ಕೆ ಸಾರಿರಿ. ಎಲ್ಲಾ ಜನರು ಇದನ್ನು ತಿಳಿಯಲಿ.

6 ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.

Kannada Holy Bible: Easy-to-Read Version

All rights reserved.

© 1997 Bible League International

Bible League International
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು