1 ಕೊರಿಂಥದವರಿಗೆ 15:41 - ದೆವಾಚಿ ಖರಿ ಖಬರ್41 ದಿಸಾಚೊ ಉಜ್ವೊಡ್ ಎಕ್ ನಮುನ್ಯಾಚೊ, ಚಂದ್ರಾಮಾಚೊ ಎಕ್ ನಮುನ್ಯಾಚೊ, ಅನಿ ಚಿಕಿಯಾಂಚೊ ಅನಿಎಕ್ ನಮುನ್ಯಾಚೊ. ಎವ್ಡೆಚ್ ನ್ಹಯ್, ಚಿಕಿಯಾಂಚ್ಯಾ ಉಜ್ವೊಡಾತ್ನಿ ಸೈತ್ ಫರಕ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಸೂರ್ಯನ ತೇಜಸ್ಸು ಒಂದು ವಿಧವಾದರೆ, ಚಂದ್ರನ ಪ್ರಕಾಶವೇ ಮತ್ತೊಂದು ವಿಧ, ಹಾಗೆಯೇ ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಸೂರ್ಯನ ಪ್ರಕಾಶ ಒಂದಾದರೆ, ಚಂದ್ರನ ಪ್ರಕಾಶವೇ ಇನ್ನೊಂದು; ನಕ್ಷತ್ರದ ಪ್ರಕಾಶವೇ ಬೇರೊಂದು. ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಸೂರ್ಯನ ಮಹಿಮೆ ಒಂದು ವಿಧ, ಚಂದ್ರನ ಮಹಿಮೆ ಮತ್ತೊಂದು ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ. ಮಹಿಮೆಯಲ್ಲಿ ಒಂದು ನಕ್ಷತ್ರಕ್ಕೂ ಇನ್ನೊಂದು ನಕ್ಷತ್ರಕ್ಕೂ ಹೆಚ್ಚುಕಡಿಮೆಯುಂಟಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಸೂರ್ಯನಿಗೆ ಒಂದು ಬಗೆಯ ಸೌಂದರ್ಯವಿದೆ; ಚಂದ್ರನಿಗೆ ಮತ್ತೊಂದು ಬಗೆಯ ಸೌಂದರ್ಯವಿದೆ. ನಕ್ಷತ್ರಗಳಿಗೆ ಇನ್ನೊಂದು ಬಗೆಯ ಸೌಂದರ್ಯವಿದೆ. ಪ್ರತಿಯೊಂದು ನಕ್ಷತ್ರವು ತನ್ನದೇ ಆದ ಸೌಂದರ್ಯವನ್ನು ಹೊಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಸೂರ್ಯನ ಮಹಿಮೆ ಬೇರೆ, ಚಂದ್ರನ ಮಹಿಮೆಯೇ ಬೇರೆ ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ. ಏಕೆಂದರೆ, ನಕ್ಷತ್ರ ನಕ್ಷತ್ರಕ್ಕೆ ಮಹಿಮೆಯಲ್ಲಿ ವ್ಯತ್ಯಾಸವಾಗಿರುವುದು. ಅಧ್ಯಾಯವನ್ನು ನೋಡಿ |