1 ಕೊರಿಂಥದವರಿಗೆ 2:12 - ದೆವಾಚಿ ಖರಿ ಖಬರ್12 ಅಮಿ ಹ್ಯಾ ಜಗಾಚೊ ಆತ್ಮೊ ಘೆವ್ಕ್‌ನಾವ್, ಹೆಚ್ಯಾ ಬದ್ಲಾಕ್, ದೆವಾಕ್ನಾ ಯೆಲ್ಲೊ ಆತ್ಮೊ ಘೆಟ್ಲಾಂವ್, ತೆಚೆಸಾಟ್ನಿ ದೆವಾನ್ ಅಮ್ಕಾ ಫುಕೊಟ್ ಕಾಯ್ ದಿಲಾ ಮನ್ತಲೆ ಅಮಿ ಕಳ್ವುನ್ ಘೆವ್ಕ್ ಪಾಜೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾವಾದರೋ ಪ್ರಾಪಂಚಿಕ ಆತ್ಮವನ್ನು ಹೊಂದಿದವರಲ್ಲ. ದೇವರು ನಮಗೆ ದಯಪಾಲಿಸಿರುವ ವರಪ್ರಸಾದಗಳನ್ನು ಅರಿತುಕೊಳ್ಳುವಂತೆ ಮಾಡುವ ಪಾರಮಾರ್ಥಿಕ ಆತ್ಮವನ್ನು ಪಡೆದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ದಯಪಾಲಿಸಿರುವ ಕೃಪಾವರಗಳನ್ನು ತಿಳುಕೊಳ್ಳುವದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾವು ಹೊಂದಿಕೊಂಡದ್ದು ದೇವರಿಂದ ಬಂದ ಪವಿತ್ರಾತ್ಮನನ್ನೇ ಹೊರತು ಪ್ರಾಪಂಚಿಕವಾದ ಆತ್ಮವನ್ನಲ್ಲ. ದೇವರು ನಮಗೆ ಉಚಿತವಾಗಿ ಕೊಟ್ಟಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ನಾವು ಆತನನ್ನು ಹೊಂದಿಕೊಂಡೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮರನ್ನು ಹೊಂದಿದ್ದೇವೆ. ಅಧ್ಯಾಯವನ್ನು ನೋಡಿ |