1 ಕೊರಿಂಥದವರಿಗೆ 3:1 - ದೆವಾಚಿ ಖರಿ ಖಬರ್1 ಭಾವಾನು ಅನಿ ಭೆನಿಯಾನು ಮಿಯಾ ತುಮ್ಚ್ಯಾಕ್ಡೆ ಆತ್ಮ್ಯಾನ್ ಭರುನ್ ಹೊತ್ತ್ಯಾ ಲೊಕಾಂಚೆಕ್ಡೆ ಬೊಲಲ್ಲ್ಯಾ ಸಾರ್ಕೆ ಬೊಲುಕ್ ನಾ, ಕ್ರಿಸ್ತಾಚ್ಯಾ ವಿಶ್ವಾಸಾತ್ ಬಾರಿಕ್ ಪೊರಾ ಸಾರ್ಕೆ ಅಸಲ್ಲ್ಯಾ ಹ್ಯಾ ಜಗಾತ್ಲ್ಯಾ ಲೊಕಾಂಚ್ಯಾ ಸಾರ್ಕೆ ಬೊಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆದರೆ ಸಹೋದರರೇ ನಾನಂತೂ ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರಿಯ ಸಹೋದರರೇ, ದೇವರ ಆತ್ಮವನ್ನು ಪಡೆದವರೊಡನೆ ಮಾತನಾಡಿದಂತೆ ನಿಮ್ಮೊಡನೆ ನಾವು ಮಾತನಾಡಲಿಲ್ಲ. ಲೌಕಿಕರು ನೀವು; ಕ್ರಿಸ್ತಯೇಸುವಿನಲ್ಲಿ ಹಸುಗೂಸುಗಳು ನೀವು ಎಂದು ಭಾವಿಸಿ ನಿಮ್ಮೊಡನೆ ಮಾತನಾಡಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಹೋದರರೇ, ನಾನಂತೂ ದೇವರಾತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತಾಡಲಾರದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತಾಡಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಹೋದರ ಸಹೋದರಿಯರೇ, ನಾನು ಆತ್ಮಿಕ ಜನರೊಂದಿಗೆ ಮಾತಾಡುವಂತೆ ಮೊದಲು ನಿಮ್ಮೊಂದಿಗೆ ಮಾತಾಡಲಾಗಲಿಲ್ಲ. ಪ್ರಾಪಂಚಿಕರೂ ಕ್ರಿಸ್ತನಲ್ಲಿ ಎಳೆಕೂಸುಗಳೂ ಆಗಿರುವಂಥವರೊಂದಿಗೆ ಮಾತಾಡುವಂತೆ ನಾನು ನಿಮ್ಮೊಂದಿಗೆ ಮಾತಾಡಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪ್ರಿಯರೇ, ನೀವು ದೇವರಾತ್ಮರಿಗೆ ತಕ್ಕಂತೆ ಬಾಳುವವರಾಗಿ ನಾನು ನಿಮ್ಮ ಸಂಗಡ ಮಾತನಾಡುತ್ತಾ ಇಲ್ಲ. ನೀವು ಇನ್ನೂ ಕ್ರಿಸ್ತ ಯೇಸುವಿನಲ್ಲಿ ಕೂಸುಗಳೂ ಪ್ರಾಪಂಚಿಕರೂ ಆಗಿರುವಿರೆಂದು ಭಾವಿಸಿ ನಿಮ್ಮ ಸಂಗಡ ಮಾತನಾಡಬೇಕಾಯಿತು. ಅಧ್ಯಾಯವನ್ನು ನೋಡಿ |