1 ಕೊರಿಂಥದವರಿಗೆ 4:9 - ದೆವಾಚಿ ಖರಿ ಖಬರ್9 ಮಾಕಾ ದಿಸ್ತಾ ದೆವಾನ್ ಅಮ್ಕಾ ಅಪೊಸ್ತಲಾಕ್ನಿ ಮರ್‍ನಾಚೆ ಹುಕುಮ್ ಹೊಲ್ಯಾ ಸಾರ್ಕೆ ಸಗ್ಳ್ಯಾಂಚ್ಯಾ ಆಕ್ರಿಚೆ ಕರುನ್ ಲೊಕಾಂಚ್ಯಾ ಮದ್ದಿ ಇಬೆ ಕರ್‍ಲಾ. ಸಗ್ಳ್ಯಾ ಜಗಾಚ್ಯಾ ಇದ್ರಾಕ್, ಮಾನ್ಸಾ ಅನಿ ದೆವಾಚ್ಯಾ ದುತಾಚ್ಯಾ ಇದ್ರಾಕ್ ಅಮಿ ಎಕ್ ಪ್ರದರ್ಶನ್ ಹೊವ್ನ್ ಗೆಲಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಬದಲಿಗೆ, ಪ್ರೇಷಿತರಾದ ನಮ್ಮನ್ನು ದೇವರು ಕಟ್ಟಕಡೆಯವರನ್ನಾಗಿಸಿದ್ದಾರೆಂದು ತೋರುತ್ತದೆ. ಎಲ್ಲರ ಮುಂದೆ ಮರಣದಂಡನೆಗೆ ಎಳೆದೊಯ್ಯಲಾಗುವವರಂತೆ ನಾವು ದೂತರಿಗೂ ಮಾನವರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣವಿಧಿ ಹೊಂದಿದವರನ್ನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ದೇವದೂತರಿಗೂ ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ನೋಟವಾದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ದೇವರು ನನಗೂ ಉಳಿದ ಅಪೊಸ್ತಲರಿಗೂ ಕಡೆಯ ಸ್ಥಾನವನ್ನು ಕೊಟ್ಟಿದ್ದಾನೆಂದು ನನಗೆ ತೋರುತ್ತದೆ. ಜನರೆಲ್ಲರ ಎದುರಿನಲ್ಲಿ ನಾವು ಮರಣದಂಡನೆಗೆ ಗುರಿಯಾದಂಥವರಾಗಿದ್ದೇವೆ. ನಾವು ದೇವದೂತರಿಗೂ ಮನುಷ್ಯರಿಗೂ ಒಟ್ಟಿನಲ್ಲಿ ಇಡೀ ಜಗತ್ತಿಗೇ ನೋಟವಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅಪೊಸ್ತಲರಾದ ನಮ್ಮನ್ನು ಮರಣದಂಡನೆ ಹೊಂದಿದವರಂತೆ ದೇವರು ಮೆರವಣಿಗೆಯ ಕಡೆಯವರನ್ನಾಗಿ ಮಾಡಿ ತೋರಿಸಿದ್ದಾರೆಂದು ನನಗನಿಸುತ್ತದೆ. ಏಕೆಂದರೆ, ದೇವರು ನಮ್ಮನ್ನು ದೇವದೂತರಿಗೂ ಮನುಷ್ಯರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವನ್ನಾಗಿ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |