1 ಕೊರಿಂಥದವರಿಗೆ 5:8 - ದೆವಾಚಿ ಖರಿ ಖಬರ್8 ತಸೆ ಮನುನ್ ಜುನ್ನ್ಯಾ ಸೊಡ್ಯಾಕ್ ಮಟ್ಲ್ಯಾರ್ ವಾಯ್ಟ್ ಅನಿ ಖೊಟ್ಯಾ ಪಾನಾಚ್ಯಾ ಸೊಡ್ಯಾಕ್ ನ್ಹಯ್ ತೆಚ್ಯಾ ಬದ್ಲಾಕ್ ನಿತಳ್ ಅನಿ ಖರ್ಯಾಚ್ಯಾ ಪುಗ್ ನಸಲ್ಲ್ಯಾ ಭಾಕ್ರಿಚೊ ಸನ್ ಆಚರನ್ ಕರುಂವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದಕಾರಣ ನಾವು ದುಷ್ಟತನ, ಕೆಡುಕುತನವೆಂಬ ಹುಳಿಹಿಟ್ಟನ್ನು ವರ್ಜಿಸೋಣ. ಪರಿಶುದ್ಧತೆ ಮತ್ತು ಸತ್ಯತೆ ಎಂಬ ಹುಳಿಯಿಲ್ಲದ ಹೊಸರೊಟ್ಟಿಯನ್ನು ತಿಂದು ಪಾಸ್ಕಹಬ್ಬವನ್ನು ಆಚರಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದ್ದರಿಂದ ನಾವು ಪಸ್ಕದ ಊಟ ಮಾಡೋಣ. ದುಷ್ಟತನ ಮತ್ತು ಕೆಡುಕತನ ಎಂಬ ಹಳೆಯ ಹುಳಿಯಿಂದ ಕೂಡಿರುವ ರೊಟ್ಟಿಯನ್ನು ನಾವು ತಿನ್ನದೆ ಹುಳಿರಹಿತವಾದ ರೊಟ್ಟಿಯನ್ನು ತಿನ್ನೋಣ. ಸರಳತೆ ಮತ್ತು ಸತ್ಯತೆ ಇವುಗಳೇ ಆ ಹುಳಿರಹಿತ ರೊಟ್ಟಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದಕಾರಣ ಹಗೆತನ, ದುಷ್ಟತನ, ಎಂಬ ಹಳೇ ಹುಳಿಯಿಂದಲ್ಲ, ಯಥಾರ್ಥತೆ ಹಾಗೂ ಸತ್ಯ ಎಂಬ ಹುಳಿಯಿಲ್ಲದ ರೊಟ್ಟಿಯಿಂದಲೇ ಹಬ್ಬವನ್ನು ಆಚರಿಸೋಣ. ಅಧ್ಯಾಯವನ್ನು ನೋಡಿ |