1 ಕೊರಿಂಥದವರಿಗೆ 6:12 - ದೆವಾಚಿ ಖರಿ ಖಬರ್12 “ಮಿಯಾ ಕಾಯ್ಬಿ ಕರುಕ್ ಹೊತಾ ಮನುನ್ ತಿಯಾ ಮನ್ಸಿಲ್, ಖರೆ ಮಿಯಾ ಕಾಯ್ ಕರ್‍ತಾ ತೆ ಸಗ್ಳೆ ಮಾಜ್ಯಾ ಪಾಯ್ದ್ಯಾಕ್ ಪಡಿನಾ. ಮಿಯಾ ಕಾಯ್ಬಿ ಕರುಕ್ ಹೊತಾ ತೆ ಖರೆ ಹಾಯ್, ಖರೆ ಮಿಯಾ ಕೊನಾಚೊಬಿ ಗುಲಾಮ್ ಹೊಯ್ನಾ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು,” ಆದರೆ ಎಲ್ಲವು ಪ್ರಯೋಜನಕರವಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು” ಆದರೆ ನಾನು ಯಾವುದಕ್ಕೂ ಅಧೀನನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯ ಇದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ನನಗೆ ಪ್ರಯೋಜನಕರವಲ್ಲ. ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯವಿದೆ. ಆದರೆ ನಾನು ಯಾವುದಕ್ಕೂ ಗುಲಾಮನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಎಲ್ಲಾ ಕಾರ್ಯಗಳನ್ನು ಮಾಡುವದಕ್ಕೆ ನನಗೆ ಸ್ವಾತಂತ್ರ್ಯವೇನೋ ಉಂಟು, ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ. ಎಲ್ಲಾ ಕಾರ್ಯಗಳನ್ನು ಮಾಡುವದಕ್ಕೆ ನನಗೆ ಸ್ವಾತಂತ್ರ್ಯವುಂಟು, ಆದರೆ ನಾನು ಯಾವದಕ್ಕೂ ಒಳಗಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ಪ್ರತಿಯೊಂದೂ ಜನರಿಗೆ ಪ್ರಯೋಜಕವಲ್ಲ. “ಪ್ರತಿಯೊಂದನ್ನೂ ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ನಾನು ಯಾವುದನ್ನೂ ನನ್ನ ಒಡೆಯನನ್ನಾಗಿ ಮಾಡಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೂ ಹಕ್ಕಿದೆ” ಎಂದು ನೀವು ಹೇಳುತ್ತೀರಿ. ಆದರೆ ಎಲ್ಲವೂ ನನಗೆ ಪ್ರಯೋಜನಕರವಾಗಿರುವುದಿಲ್ಲ. ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಹಕ್ಕಿದೆ; ಆದರೆ ನಾನು ಯಾವುದಕ್ಕೂ ಗುಲಾಮನಾಗಿರುವುದಿಲ್ಲ. ಅಧ್ಯಾಯವನ್ನು ನೋಡಿ |