1 ಕೊರಿಂಥದವರಿಗೆ 6:16 - ದೆವಾಚಿ ಖರಿ ಖಬರ್16 ವೆಭಿಚಾರ್ ಕರ್‍ತಲ್ಯಾ ಬಾಯ್ಕೊಮನ್ಸಿಕ್ನಾ ಎಕ್ ಹೊತಲೊ, ತಿಚ್ಯಾ ವಾಂಗ್ಡಾ ಎಕುಚ್ ಆಂಗ್ ಹೊತಾ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ಪವಿತ್ರ್ ಪುಸ್ತಕಾತುಚ್ ಮಟಲ್ಲೆ ಹಾಯ್; “ತೆನಿ ದೊಗೆಬಿ ಎಕ್ ಆಂಗ್ ಹೊತ್ಯಾತ್”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಇಬ್ಬರೂ ಒಂದೇ ಶರೀರವಾಗುತ್ತಾರೆ,” ಎಂದು ಬರೆಯಲಾಗಿದೆ. ವೇಶ್ಯೆಯ ಸಂಸರ್ಗ ಮಾಡುವವನು ಅವಳೊಂದಿಗೆ ಒಂದೇ ದೇಹವಾಗುತ್ತಾನೆ, ಎಂದು ನಿಮಗೆ ತಿಳಿಯದೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಸೂಳೆಯ ಸಂಸರ್ಗ ಮಾಡುವವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬದು ನಿಮಗೆ ತಿಳಿಯದೋ? ಗಂಡಹೆಂಡರಿಬ್ಬರು ಒಂದೇ ಶರೀರವಾಗಿರುವರೆಂದು ದೇವರು ಹೇಳುತ್ತಾನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಇಬ್ಬರೂ ಒಂದೇ ದೇಹವಾಗುತ್ತಾರೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದ್ದರಿಂದ ಸೂಳೆಯೊಂದಿಗೆ ಲೈಂಗಿಕ ಸಂಬಂಧವಿರುವವನು ಆಕೆಯೊಂದಿಗೆ ಒಂದೇ ದೇಹವಾಗಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ವೇಶ್ಯೆಯನ್ನು ಸೇರುವವನು ಅವಳೊಂದಿಗೆ ಒಂದೇ ದೇಹವಾಗುವನೆಂಬುದು ನಿಮಗೆ ತಿಳಿಯದೋ? “ಅವರಿಬ್ಬರೂ ಒಂದೇ ಶರೀರವಾಗಿರುವರು,” ಎಂದು ಹೇಳಲಾಗಿದೆಯಲ್ಲವೇ? ಅಧ್ಯಾಯವನ್ನು ನೋಡಿ |