1 ಕೊರಿಂಥದವರಿಗೆ 6:7 - ದೆವಾಚಿ ಖರಿ ಖಬರ್7 ತುಮ್ಚ್ಯಾ ಮದ್ದಿ ನ್ಯಾಯ್ ನಿರ್ನಯ್ ಕರುಕ್ ಜಾತಲೆ ಝಗ್ಡೆ ಹಾತ್ ಮಟ್ಲ್ಯಾರುಚ್ ಎಕ್ ವಾಟೆನ್ ತುಮಿ ಹಾರಲ್ಲ್ಯಾ ಸಾರ್ಕೆ, ಅಶೆ ರ್‍ಹಾತಾನಾ ಅನ್ನ್ಯಾಯ್ ಸೊಸುನ್ ಘೆವ್ಕ್, ನಾ ಹೊಲ್ಯಾರ್ ಅಪ್ನಾಕುಚ್ ಲುಕ್ಷಾನ್ ಸೊಸುಕ್ ತುಮಿ ತಯಾರ್ ನಾಶಿ ಕಶ್ಯಾಕ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿಮ್ಮಲ್ಲಿ ವಿವಾದಗಳಿರುವುದಾದರೆ ನೀವು ಸೋತವರೆಂಬುದಕ್ಕೆ ಇದೇ ಗುರುತಾಗಿದೆ, ಅದಕ್ಕಿಂತ ಅನ್ಯಾಯವನ್ನು ಸಹಿಸುವುದೇ ಮೇಲು; ಮೋಸವನ್ನು ಅದರಿಂದಾದ ನಷ್ಟವನ್ನು ಯಾಕೆ ತಾಳಬಾರದು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿಮ್ಮ ನಿಮ್ಮಲ್ಲಿರುವ ವ್ಯಾಜ್ಯಗಳೇ ನಿಮ್ಮ ಸೋಲಿನ ಸೂಚನೆಗಳು. ಅದಕ್ಕಿಂತ ಅನ್ಯಾಯವನ್ನು ಸಹಿಸಿಕೊಳ್ಳುವುದು ಒಳ್ಳೆಯದಲ್ಲವೇ? ಸುಲಿಗೆಗೆ ತುತ್ತಾದರೂ ಸಾವಧಾನದಿಂದ ಇರುವುದು ಒಳಿತಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದಕ್ಕಿಂತ ಅನ್ಯಾಯವನ್ನು ಯಾಕೆ ಸಹಿಸಬಾರದು? ಆಸ್ತಿಯ ನಷ್ಟವನ್ನು ಯಾಕೆ ತಾಳಬಾರದು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀವು ಆಗಲೇ ಸೋತು ಹೋಗಿದ್ದೀರೆಂಬುದನ್ನು ನಿಮ್ಮ ಮಧ್ಯದಲ್ಲಿರುವ ವ್ಯಾಜ್ಯಗಳೇ ಸೂಚಿಸುತ್ತವೆ. ಅದಕ್ಕಿಂತ, ನೀವು ಕೆಟ್ಟದ್ದನ್ನು ಸಹಿಸಿಕೊಳ್ಳಬೇಕಿತ್ತು; ಮೋಸವನ್ನು ತಾಳಿಕೊಳ್ಳಬೇಕಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮ್ಮ ನಿಮ್ಮಲ್ಲಿ ವ್ಯಾಜ್ಯವಿರುವುದೇ, ನೀವು ಈಗಾಗಲೇ ಸಂಪೂರ್ಣವಾಗಿ ಸೋತವರೆಂಬುದಕ್ಕೆ ಸೂಚನೆಗಳಾಗಿವೆ. ಆದರೆ ಅನ್ಯಾಯವನ್ನು ಏಕೆ ಸಹಿಸಬಾರದು? ಏಕೆ ಮೋಸಹೊಂದಬಾರದು? ಅಧ್ಯಾಯವನ್ನು ನೋಡಿ |