1 ಕೊರಿಂಥದವರಿಗೆ 7:5 - ದೆವಾಚಿ ಖರಿ ಖಬರ್5 ಹಿ ಹಕ್ಕಾ ಎಕಾಮೆಕಾಕ್ ನಾ ಮನುನಕಾಶಿ, ತಶೆ ಕರ್‍ತಲೆ ರ್‍ಹಾಲ್ಯಾರ್ ದೊಗಾಂಚಿಬಿ ಕಬುಲಿ ರ್‍ಹಾವ್ಕ್ ಪಾಜೆ; ತೆಬಿ ಮಾಗ್ನಿ ಕರುಸಾಟ್ನಿ ಉಲ್ಲೊಸೊ ಎಳ್ ತವ್ಡೆಚ್ ಮಾನಾ ಅನಿಪರ್ತುನ್ ತುಮಿ ಎಕ್ ಹೊವ್ಚೆ, ನಾ ಹೊಲ್ಯಾರ್ ತುಮ್ಚೆ ಸ್ವನಿಯಂತ್ರನ್ ಕಮಿ ಹೊಯ್ಲ್ ಅನಿ ಸೈತಾನ್ ತುಮ್ಕಾ ನಾಡಿಲ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದುದರಿಂದ ಸತಿಪತಿಯರು ಒಬ್ಬರಿಗೊಬ್ಬರು ದಾಂಪತ್ಯಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಧ್ಯಾನ, ಪ್ರಾರ್ಥನೆಗಳಲ್ಲಿ ನಿರತರಾಗಿರಲು, ಸ್ವಲ್ಪಕಾಲ ಒಬ್ಬರನ್ನೊಬ್ಬರು ಅಗಲಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿ ಇರಬೇಕು. ಅನಂತರ ಒಂದುಗೂಡಬೇಕು. ಇಲ್ಲದೆ ಹೋದರೆ, ನಿಮ್ಮಲ್ಲಿ ಸಂಯಮ ಇಲ್ಲದಿರುವುದನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋದಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ದಂಪತಿ ಧರ್ಮವನ್ನು ಬಿಟ್ಟು ಅಗಲಿರಬಹುದೇ ಹೊರತು ಅನ್ಯಥಾ ಹಾಗೆ ಮಾಡಬಾರದು; ಆಮೇಲೆ ಸೈತಾನನು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ನಿಮಗೆ ದುಷ್ಪ್ರೇರಣೆಮಾಡದಂತೆ ತಿರಿಗಿ ಕೂಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದ್ದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಗಂಡ ಹೆಂಡತಿ ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ಪ್ರಾರ್ಥನೆಗಾಗಿ ಅಗಲಿರಬಹುದಷ್ಟೇ. ಇಲ್ಲದಿದ್ದರೆ, ಸೈತಾನನು ನಿಮ್ಮ ಸಂಯಮ ಇಲ್ಲದಿರುವುದನ್ನು ನೋಡಿ ನಿಮ್ಮನ್ನು ಶೋಧಿಸದಂತೆ ಒಂದುಗೂಡಬೇಕು. ಅಧ್ಯಾಯವನ್ನು ನೋಡಿ |