1 ತಿಮೊಥೆಯನಿಗೆ 1:2 - ದೆವಾಚಿ ಖರಿ ಖಬರ್2 ತುಕಾ ತಿಮೊತಿ, ವಿಶ್ವಾಸಾತ್ ಹೊತ್ತ್ಯಾ ಮಾಜ್ಯಾ ಖರ್‍ಯಾ ಲೆಕಾ. ಅಮ್ಚೊ ದೆವ್ ಬಾಪ್ ಅನಿ ಅಮ್ಚೊ ಧನಿ ಜೆಜು ಕ್ರಿಸ್ತ್ ಅಪ್ಲಿ ಕುರ್ಪಾ ದಯಾ,ಅನಿ ಶಾಂತಿ ತುಕಾ ದಿಂವ್ದಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀನು ನಂಬಿಕೆ ಉಳ್ಳವನಾಗಿರುವುದರಿಂದ ನನಗೆ ನಿಜವಾದ ಮಗನಂತಿರುವೆ. ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ಕೃಪೆಯೂ ಕರುಣೆಯೂ ಶಾಂತಿಯೂ ನಿನಗೆ ಲಭಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಂಬಿಕೆಯಲ್ಲಿ ನನ್ನ ನಿಜ ಪುತ್ರನಾಗಿರುವ ತಿಮೊಥೆಯನಿಗೆ ಬರೆಯುವುದು: ನಮ್ಮ ತಂದೆ ದೇವರಿಂದಲೂ, ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ದೊರೆಯಲಿ. ಅಧ್ಯಾಯವನ್ನು ನೋಡಿ |