1 ಥೆಸಲೋನಿಕದವರಿಗೆ 1:8 - ದೆವಾಚಿ ಖರಿ ಖಬರ್8 ಧನಿಯಾಚ್ಯಾ ವಿಶಯಾತ್ಲಿ ಬರಿ ಖಬರ್ ತುಮ್ಚ್ಯಾ ವೈನಾ ಸಗ್ಳ್ಯಾ ಮೆಸಿದೊನಿಯಾತ್ ಅನಿ ಅಖಾಯಿಯಾತ್ ಪರ್ಗಟ್ ಹೊಲ್ಲೆ ತವ್ಡೆಚ್ ನ್ಹಯ್, ದೆವಾ ವರ್‍ತಿ ತುಮಿ ಥವಲ್ಲ್ಯಾ ವಿಶ್ವಾಸಾಚಿ ಖಬರ್ ಸೈತ್ ಸಗ್ಳ್ಯಾಕ್ಡೆ ಜಾವ್ನ್ ಪಾವ್ಲಾ, ಹೆಚ್ಯಾ ವಿಶಯಾತ್ ಅಮಿ ಅನಿ ಕಾಯ್ ಜಾಸ್ತಿಚೆ ಸಾಂಗುಚೆ ಮನುನ್ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪ್ರಭುವಿನ ಉಪದೇಶವು ಮಕೆದೋನಿಯ ಮತ್ತು ಅಖಾಯದಲ್ಲಿ ನಿಮ್ಮಿಂದ ಪ್ರಚಾರವಾಯಿತು. ಇದಲ್ಲದೆ ದೇವರ ಮೇಲಿನ ನಿಮ್ಮ ನಂಬಿಕೆಯು ಎಲ್ಲಾ ಕಡೆಗಳಲ್ಲಿಯೂ ತಿಳಿದುಬಂದಿತು. ಆದುದರಿಂದ ನಿಮ್ಮ ನಂಬಿಕೆಯ ಬಗ್ಗೆ ಏನೂ ಹೇಳಬೇಕಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯ ಹಾಗೂ ಅಖಾಯದಲ್ಲಿ ಘೋಷಿತವಾದದ್ದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಹರಡಿತು. ಆದ್ದರಿಂದ ಇದನ್ನು ಕುರಿತು ನಾವು ಹೇಳಬೇಕಾದ ಅವಶ್ಯ ಏನೂ ಇಲ್ಲ. ಅಧ್ಯಾಯವನ್ನು ನೋಡಿ |