13 ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.
13 ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.
13 ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನವ್ಮಿುಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ನಿಜವಾಗಿ ದೇವರ ವಾಕ್ಯವೇ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
13 ನೀವು ದೇವರ ಸಂದೇಶವನ್ನು ಸ್ವೀಕರಿಸಿಕೊಂಡದ್ದಕ್ಕಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀವು ಆ ಸಂದೇಶವನ್ನು ನಮ್ಮಿಂದ ಕೇಳಿ, ಅದನ್ನು ದೇವರ ವಾಕ್ಯದಂತೆ ಒಪ್ಪಿಕೊಂಡಿರೇ ಹೊರತು ಮಾನವನ ವಾಕ್ಯಗಳೆಂದಲ್ಲ. ಅದು ನಿಜವಾಗಿಯೂ ದೇವರ ಸಂದೇಶ. ಆ ಸಂದೇಶವು ನಂಬುವವರಾದ ನಿಮ್ಮಲ್ಲಿ ಕಾರ್ಯಮಾಡುತ್ತದೆ.
13 ಈ ಕಾರಣಕ್ಕಾಗಿಯೇ ನಂಬುವವರಾದ ನಿಮ್ಮಲ್ಲಿ ಕಾರ್ಯಸಾಧಿಸುವ ದೇವರ ವಾಕ್ಯವನ್ನು ನಮ್ಮಿಂದ ನೀವು ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ, ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.