1 ಪೇತ್ರನು 1:12 - ದೆವಾಚಿ ಖರಿ ಖಬರ್12 ತೆಂಚೆಸಾಟ್ನಿ ನ್ಹಯ್, ತುಮ್ಚ್ಯಾಸಾಟ್ನಿ ತೆಂಕಾ ಪ್ರವಾದ್ ಕರುನ್ ಸಾಂಗ್ತಲೆ ಕಾಮ್ ದಿಲ್ಲೆ ಹಾಯ್ ಮನುನ್ ದೆವಾನ್ ಪ್ರವಾದ್ಯಾಕ್ನಿ ಕಳ್ವುನ್ ದಿಲ್ಲ್ಯಾನ್. ತೆನಿ ಸಾಂಗಟಲ್ಲ್ಯಾ ತ್ಯಾಚ್ ಸಂಗ್ತಿಯಾ ಅತ್ತಾ ಸರ್ಗಾ ವೈನಾ ಯೆಲ್ಲ್ಯಾ ಪವಿತ್ರ್ ಆತ್ಮ್ಯಾಚ್ಯಾ ತಾಕ್ತಿನ್ ತುಮ್ಕಾ ಬರಿ ಖಬರ್ ಪರ್ಗಟ್ ಕರಲ್ಲೆ ತುಮ್ಕಾ ಕಳ್ವುಲ್ಯಾನಿ, ತೆ ಸಗ್ಳ್ಯೆ ದಿಸುನ್ ಯೆತಲೆ ಬಗುಕ್ ದೆವಾಚಿ ದುತಾ ಸಯ್ತ್ ರಾಕುನ್ ಹಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿ |
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.