1 ಪೇತ್ರನು 1:3 - ದೆವಾಚಿ ಖರಿ ಖಬರ್3 ದೆವಾಚಿ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಬಾಬಾಚೆ ಸುತ್ತಿ ಹೊಂವ್ದಿತ್, ತೆನಿ ಅಪ್ನಾಚ್ಯಾ ಮೊಟ್ಯಾ ದಯೆನ್, ಜೆಜು ಕ್ರಿಸ್ತಾಚ್ಯಾ ಝಿತ್ತೊ ಹೊವ್ನ್ ಉಟ್ತಲ್ಯಾಚ್ಯಾ ವೈನಾ ಅಮ್ಕಾ ಎಕ್ ಝಿತ್ತ್ಯಾ ಬರೊಸ್ಯಾತ್ ನ್ಹವ್ಯಾನ್ ಉಪ್ಜಿ ಸಾರ್ಕೆ ಕರ್ಲ್ಯಾನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರಿಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯೂ ದೇವರೂ ಆಗಿರುವವರಿಗೆ ಸ್ತೋತ್ರವಾಗಲಿ. ಅವರು ಕ್ರಿಸ್ತ ಯೇಸುವನ್ನು ತಮ್ಮ ಮಹಾ ಕರುಣಾನುಸಾರವಾಗಿ, ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಜೀವಕರವಾದ ನಿರೀಕ್ಷೆಗೆ ನಮ್ಮನ್ನು ತಿರುಗಿ ಹುಟ್ಟಿಸಿದ್ದಾರೆ. ಅಧ್ಯಾಯವನ್ನು ನೋಡಿ |