1 ಪೇತ್ರನು 2:11 - ದೆವಾಚಿ ಖರಿ ಖಬರ್11 ಮಾಜ್ಯಾ ಪ್ರೆಮಾಚ್ಯಾನು ಮಿಯಾ ತುಮ್ಕಾ ವಿನಂತಿ ಕರ್ತಾ ತುಮಿ ಹ್ಯಾ ಜಗಾತ್ ಪರ್ವಾಸಾಕ್ ಯೆಲ್ಲೆ ಅನಿ ದುಸ್ರ್ಯಾ ದೆಶಾಚೆ ಸಾರ್ಕೆ ಹೊವ್ನ್ ಹಾಸಿ, ತಸೆ ಹೊವ್ನ್ ತುಮ್ಕಾಚ್ ತುಮಿ ತುಮ್ಚ್ಯಾ ಆಂಗಾಚ್ಯಾ ಆಶಾಕ್ನಿ ಸೊಡುನ್ ದಿವ್ ನಕಾಸಿ ತಿ ಕನ್ನಾಬಿ ಆತ್ಮ್ಯಾಚ್ಯಾ ವಿರೊದ್ ಝಡ್ಗುನ್ಗೆತ್ ರ್‍ಹಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಪ್ರಿಯರೇ, ಪ್ರವಾಸಿಗಳೂ ಪರದೇಶಸ್ಥರೂ ಆಗಿರುವ ನೀವು ನಿಮ್ಮ ಆತ್ಮದ ಮೇಲೆ ಯುದ್ಧಮಾಡುವ ಶಾರೀರಿಕ ಅಭಿಲಾಷೆಗಳಿಗೆ ದೂರವಾಗಿರಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪ್ರಿಯ ಸ್ನೇಹಿತರೇ, ನೀವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಪರದೇಶದವರಂತೆ ಇದ್ದೀರಿ. ಆದ್ದರಿಂದ ನಿಮ್ಮ ದೇಹಗಳಿಗೆ ಇಷ್ಟವಾದ ಕೆಟ್ಟಸಂಗತಿಗಳಿಂದ ದೂರವಾಗಿರಿ. ಇವು ನಿಮ್ಮ ಜೀವಾತ್ಮಕ್ಕೆ ವಿರುದ್ಧವಾಗಿ ಹೋರಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಪ್ರಿಯರೇ, ಈ ಲೋಕದಲ್ಲಿ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿ |