1 ಪೇತ್ರನು 2:23 - ದೆವಾಚಿ ಖರಿ ಖಬರ್23 ತೆಕಾ ಅವ್ಮಾನ್ ಕರಲ್ಲ್ಯಾ ತನ್ನಾ ತೆನಿ ಫಾಟಿ ಜವಾಬ್ ದಿವ್ನ್ ಅವ್ಮಾನ್ ಕರುಕ್ನಾ, ತೆಕಾ ಕಸ್ಟ್ ದಿಲ್ಲ್ಯಾ ತನ್ನಾ ತೆನಿ ಧಮ್ಕಿ ದಿವ್ಕ್ ನಾ, ಖರೆ ತೆನಿ ಅಪ್ನಾಕುಚ್ ದೆವಾಚ್ಯಾ ಬರೊಸ್ಯಾ ವೈರ್ ಸೊಡುನ್ ದಿಲ್ಯಾನ್ ತೊ ದೆವ್ ನಿಯತ್ತಿಚೊ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಜನರು ಕ್ರಿಸ್ತನನ್ನು ಬಯ್ದರೂ ಆತನು ಅವರನ್ನು ಬಯ್ಯಲಿಲ್ಲ. ಆತನು ಸಂಕಟವನ್ನು ಅನುಭವಿಸಿದರೂ ಜನರನ್ನು ಹೆದರಿಸಲಿಲ್ಲ. ಆತನು ತನ್ನ ಕಾರ್ಯವನ್ನು ದೇವರಿಗೆ ವಹಿಸಿದನು. ಸರಿಯಾದ ನ್ಯಾಯತೀರ್ಪು ನೀಡುವಾತನು ದೇವರೊಬ್ಬನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಬೈಯ್ಯುವವರನ್ನು ಅವರು ಪ್ರತಿಯಾಗಿ ಬೈಯಲಿಲ್ಲ. ಅವರು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವ ತಂದೆಗೆ ತಮ್ಮನ್ನು ಒಪ್ಪಿಸಿದರು. ಅಧ್ಯಾಯವನ್ನು ನೋಡಿ |