1 ಪೇತ್ರನು 5:10 - ದೆವಾಚಿ ಖರಿ ಖಬರ್10 ಖರೆ ಉಲ್ಲೊ ಕಸ್ಟ್ ತುಮಿ ಸೊಸುನ್ ಹೊಲ್ಲ್ಯಾ ಮಾನಾ ಸಗ್ಳ್ಯಾ ಕುರ್ಪೆಚೊ ದೆವ್ ತೆನಿ ಕ್ರಿಸ್ತಾಚ್ಯಾ ವಾಂಗ್ಡಾ ಅಪ್ನಾಚ್ಯಾ ಅಂತ್ ನಸಲ್ಲ್ಯಾ ಮಹಿಮೆತ್ ವಾಟೊ ಘೆವ್ಕ್ ತುಮ್ಕಾ ಬಲ್ವುತಾ, ತೊ ಅಪ್ನಿಚ್ ತುಮ್ಕಾ ಪರಿಪುರ್ನ್ ಕರ್ತಾ ಅನಿ ಆಧಾರ್ ದಿತಾ, ಅನಿ ಬಳ್ ದಿತಾ ಘಟ್ ಕರ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು. ಅಧ್ಯಾಯವನ್ನು ನೋಡಿ |