1 ಯೋಹಾನನು 1:1 - ದೆವಾಚಿ ಖರಿ ಖಬರ್1 ಅಮಿ ಅತ್ತಾ ಜಿವನಾಚ್ಯಾ ಗೊಸ್ಟಿಚ್ಯಾ ವಿಶಯಾತ್ ಬೊಲ್ತಾಂವ್, ಹ್ಯೊ ಜಗ್ ರಚುಚ್ಯಾ ಅದ್ದಿಚ್ಯಾನ್ ಹೊತ್ತೆ. ತೆ ಅಮಿ ಕಾನಾನಿ ಆಯಿಕ್ಲಾಂವ್,ಅನಿ ಅಮ್ಚ್ಯಾ ಡೊಳ್ಯಾನಿ ಬಗ್ಲಾಂವ್,ಅಮಿ ತೆಕಾ ಬಗುನ್ ಅಮ್ಚ್ಯಾ ಹಾತಿನ್ ಅಪಡ್ಲ್ಯಾಂವ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾವು ನಿಮಗೆ ಪ್ರಸಿದ್ಧಿಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನಸ್ಸಿಟ್ಟು ನೋಡಿ ಕೈಯಿಂದ ಮುಟ್ಟಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಈ ಲೋಕವು ಆರಂಭವಾಗುವುದಕ್ಕಿಂತ ಮುಂಚಿನಿಂದಲೂ ಇದ್ದ ಜೀವವಾಕ್ಯದ ಕುರಿತಾಗಿ ನಾವು ನಿಮಗೆ ಬರೆಯುತ್ತಿದ್ದೇವೆ: ಅದನ್ನು ಕಿವಿಯಾರೆ ಕೇಳಿದೆವು; ಕಣ್ಣಾರೆ ನೋಡಿದೆವು, ಮನಸ್ಸಿಟ್ಟು ಗಮನಿಸಿದೆವು, ಕೈಗಳಿಂದ ಮುಟ್ಟಿ ನೋಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದಿಯಿಂದ ಇರುವಂಥದ್ದೂ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದ ಆ ಜೀವವಾಕ್ಯವನ್ನೇ ಸಾರುತ್ತಿದ್ದೇವೆ. ಅಧ್ಯಾಯವನ್ನು ನೋಡಿ |