1 ಯೋಹಾನನು 2:8 - ದೆವಾಚಿ ಖರಿ ಖಬರ್8 ಜಾಲ್ಯಾರ್ ಬಿ ಮಿಯಾ ತುಮ್ಕಾ ಲಿವ್ತಲೊ ಹುಕುಮ್ ನ್ಹವೊಚ್, ಕಶ್ಯಾಕ್ ಮಟ್ಲ್ಯಾರ್, ತೆಚೆ ಖರೆಪಾನ್ ಕ್ರಿಸ್ತಾತ್ ಅನಿ ತುಮ್ಚ್ಯಾ ಮದ್ದಿ ದಿಸುನ್ ಯೆತಾ. ತೆಚೆಸಾಟ್ನಿ ಕಾಳೊಕ್ ಸರುನ್ ಜಾವ್ಕಲಾಗ್ಲಾ, ಅನಿ ಖರೊ ಉಜ್ವೊಡ್ ಹೊಳ್ವಳುಕ್ ಲಾಗಲ್ಲೊ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೂ ನಾನೀಗ ನಿಮಗೆ ಬರೆಯುತ್ತಿರುವುದು ಒಂದು ವಿಧದಲ್ಲಿ ಹೊಸ ಆಜ್ಞೆಯೇ ಸರಿ. ಅದರ ನೈಜಗುಣವು ಕ್ರಿಸ್ತಯೇಸುವಿನಲ್ಲಿ ಬೆಳಗಿದಂತೆ, ನಿಮ್ಮ ಜೀವನದಲ್ಲೂ ಬೆಳಗುತ್ತದೆ. ಏಕೆಂದರೆ, ಕತ್ತಲು ಕಳೆದುಹೋಗುತ್ತಿದೆ; ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೂ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಹೇಗಂದರೆ ಕತ್ತಲೆಯು ಕಳೆದುಹೋಗುತ್ತದೆ, ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಈ ಆಜ್ಞೆಯನ್ನು ನಾನು ನಿಮಗೆ ಹೊಸ ಆಜ್ಞೆಯೋ ಎಂಬಂತೆ ಬರೆಯುತ್ತಿದ್ದೇನೆ. ಈ ಆಜ್ಞೆಯು ಸತ್ಯವಾದದ್ದು. ಅದರ ಸತ್ಯತೆಯನ್ನು ನೀವು ಯೇಸುವಿನಲ್ಲಿಯೂ ನಿಮ್ಮಲ್ಲಿಯೂ ಕಾಣಬಹುದು. ಕತ್ತಲೆಯು ಕಳೆದುಹೋಗುತ್ತಿದೆ ಮತ್ತು ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ತಿರುಗಿ ನಾನು ನಿಮಗೆ ಬರೆಯುವುದು ಹೊಸ ಅಪ್ಪಣೆಯೇ. ಇದು ಕ್ರಿಸ್ತ ಯೇಸುವಿನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ಸತ್ಯವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ. ಅಧ್ಯಾಯವನ್ನು ನೋಡಿ |