1 ಯೋಹಾನನು 3:1 - ದೆವಾಚಿ ಖರಿ ಖಬರ್1 ಬಾಬಾನ್ ಅಮ್ಚೊ ಕವ್ಡೊ ಲೈ ಪ್ರೆಮ್ ಕರ್ಲಾ ಮನುನ್ ಬಗಾ! ಅಮ್ಕಾ ದೆವಾಚಿ ಪೊರಾ ಮನುನ್ ಬಲ್ವು ಸಾರ್ಕೆ ಕರ್ಲ್ಯಾನ್, ಖರೆ ಮಟ್ಲ್ಯಾರ್ ಅಮಿ ದೆವಾಚಿ ಪೊರಾ, ಜಗ್ ಅಮ್ಕಾ ವಳ್ಕಿನಾ. ಕಶ್ಯಾಕ್ ಮಟ್ಲ್ಯಾರ್ ತೊ ದೆವಾಕ್ ವಳ್ಕಿನಾವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವರ ಮಕ್ಕಳೆಂಬ ಹೆಸರನ್ನು ನಮಗೆ ಕೊಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನೆ ನೋಡಿರಿ; ನಾವು ಆತನ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವದಿಲ್ಲ, ಅದು ಆತನನ್ನು ತಿಳಿದುಕೊಳ್ಳಲಿಲ್ಲವಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ತಂದೆಯು ನಮ್ಮನ್ನು ಬಹಳವಾಗಿ ಪ್ರೀತಿಸಿದನು! ದೇವರ ಮಕ್ಕಳು ಎಂಬ ಹೆಸರನ್ನು ನಮಗೆ ಕೊಡುವಷ್ಟರ ಮಟ್ಟಿಗೆ ದೇವರು ನಮ್ಮನ್ನು ಪ್ರೀತಿಸಿದನು. ನಾವು ನಿಜವಾಗಿಯೂ ದೇವರ ಮಕ್ಕಳಾಗಿದ್ದೇವೆ. ಆದರೆ ಲೋಕದಲ್ಲಿರುವ ಜನರಾದರೋ ನಾವು ದೇವರ ಮಕ್ಕಳೆಂಬುದನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವರು ದೇವರನ್ನು ತಿಳಿದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |