1 ಯೋಹಾನನು 4:20 - ದೆವಾಚಿ ಖರಿ ಖಬರ್20 ಎಕ್ಲೊ, ದೆವಾಚೊ ಪ್ರೆಮ್ ಕರ್ತಾ ಮನುನ್ ಅಪ್ಲ್ಯಾ ಭಾವಾಕುಚ್ ವಿರೊದ್ ಕರ್ತಾ ಹೊಲ್ಯಾರ್, ತೊ ಝುಟೊಚ್, ಅಪ್ನಾಚ್ಯಾ ಡೊಳ್ಯಾಚ್ಯಾ ಇದ್ರಾಕ್ ಹೊತ್ತ್ಯಾ ಭಾವಾಕುಚ್ ತೊ ಪ್ರೆಮ್ ಕರಿನಾ ಹೊಲ್ಯಾರ್ ದಿಸಿನಸಲ್ಲ್ಯಾ ದೆವಾಕ್ ತೊ ಕಸೊ ಪ್ರೆಮ್ ಕರ್ತಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಒಬ್ಬನು ತಾನು ದೇವರನ್ನು ಪ್ರೀತಿಸುತ್ತೇನೆಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಪ್ರೀತಿಸಲಾರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ನಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿಕೊಳ್ಳುವವನು ತನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ದ್ವೇಷಿಸಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಅವನು ತನ್ನ ಸಹೋದರನನ್ನು ಕಣ್ಣಾರೆ ನೋಡುತ್ತಿದ್ದರೂ ಅವನನ್ನು ದ್ವೇಷಿಸುತ್ತಾನೆ. ಆದ್ದರಿಂದ ಅವನು ದೇವರನ್ನು ಪ್ರೀತಿಸಲಾಗುವುದಿಲ್ಲ. ಏಕೆಂದರೆ ಅವನು ದೇವರನ್ನು ಎಂದೂ ನೋಡಿಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಒಬ್ಬನು, “ನಾನು ದೇವರನ್ನು ಪ್ರೀತಿಸುತ್ತೇನೆ,” ಎಂದು ಹೇಳಿ ತನ್ನ ಸಹೋದರರನ್ನು ದ್ವೇಷ ಮಾಡಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು, ಕಾಣದಿರುವ ದೇವರನ್ನು ಪ್ರೀತಿಸಲಾರನು. ಅಧ್ಯಾಯವನ್ನು ನೋಡಿ |