1 ಯೋಹಾನನು 5:16 - ದೆವಾಚಿ ಖರಿ ಖಬರ್16 ಕೊನ್ ತರ್ಬಿ ಅಪ್ಲೊ ಭಾವ್ ಪಾಪ್ ಕರ್ತಲೆ ಬಗಟ್ಲ್ಯಾರ್, ಅನಿ ತೊ ತ್ಯಾ ಪಾಪಾತ್ ಭಾಗಿಧಾರ್ ನ್ಹಯ್ ಹೊಲ್ಯಾರ್, ತ್ಯಾ ಭಾವಾಚ್ಯಾಸಾಟ್ನಿ ಮಾಗ್ನಿ ಕರುಂದಿತ್, ತನ್ನಾ ದೆವ್ ತ್ಯಾ ಪಾಪಿ ಮಾನ್ಸಾಕ್ ಜಿವನ್ ದಿತಾ. ಸದಾ ಸರ್ವತಾಕ್ ರ್‍ಹಾತಲ್ಯಾ ಮರ್ನಾಕ್ಡೆ ಚಾಲ್ವುತಲೊ ಪಾಪ್ ಕರ್ತಲ್ಯಾಂಚ್ಯಾ ವಿಶಯಾತ್ ಮಿಯಾ ಸಾಂಗ್ತಾ , ಹ್ಯೊ ಪಾಪ್ ಕರ್ತಲ್ಯಾಂಚ್ಯಾಸಾಟ್ನಿ ತುಮಿ ಮಾಗ್ನಿ ಕರುಚೆ ಮನುನ್ ಮಿಯಾ ಸಾಂಗಿನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮಾರಕವಲ್ಲದ ಪಾಪವೊಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೋದರನಿಗೆ ಸಜ್ಜೀವವನ್ನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಾದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ; ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಮರಣಕರವಲ್ಲದ ಪಾಪವನ್ನು ಮಾಡುವ ಸಹೋದರ ಅಥವಾ ಸಹೋದರಿಯನ್ನು ಯಾರಾದರೂ ಕಂಡರೆ, ಆ ಸಹೋದರ ಅಥವಾ ಸಹೋದರಿಯರಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಅವರಿಗೆ ಜೀವವನ್ನು ದಯಪಾಲಿಸುವರು. ಮರಣಕರವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಆದರೆ ಮರಣಕರವಾದ ಪಾಪವೂ ಉಂಟು. ಈ ಮರಣಕರವಾದ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ. ಅಧ್ಯಾಯವನ್ನು ನೋಡಿ |