2 ಕೊರಿಂಥದವರಿಗೆ 1:10 - ದೆವಾಚಿ ಖರಿ ಖಬರ್10 ಮರ್‍ನಾಚ್ಯಾ ಭಯಂಕರ್ ಕಸ್ಟಾತ್ನಾ ತೆನಿಚ್ ಅಮ್ಕಾ ರಾಕ್ಲ್ಯಾನ್; ಅನಿ ಫಿಡೆಬಿ ತೊಚ್ ಅಮ್ಕಾ ರಾಕ್ತಾ. ಅಮ್ಕಾ ಕನ್ನಾಬಿ ಸೊಡುನ್ ಘಾಲಿನಸಲ್ಲ್ಯಾ, ತೆಚ್ಯಾ ವರ್ತಿ ಅಮ್ಚೊ ಬರೊಸೊ ಅಮಿ ಥವ್ಲ್ಯಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910-11 ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10-11 ದೇವರೇ ನಮ್ಮನ್ನು ಈ ಭಯಂಕರ ಮರಣದಿಂದ ಪಾರುಮಾಡಿದರು. ಇನ್ನು ಮುಂದಕ್ಕೂ ಪಾರುಮಾಡುವರು. ಹೌದು, ನೀವು ಸಹ ನಮಗಾಗಿ ಪ್ರಾರ್ಥಿಸುತ್ತಾ ನಮ್ಮೊಡನೆ ಸಹಕರಿಸಿದರೆ, ಇನ್ನು ಮುಂದಕ್ಕೂ ನಮ್ಮನ್ನು ಪಾರುಮಾಡುವರು ಎಂಬ ಭರವಸೆಯಿಂದ ಇದ್ದೇವೆ. ಇದರ ಫಲವಾಗಿ ನಮಗೆ ದೊರೆಯುವ ವರದಾನಗಳಿಗಾಗಿ ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10-11 ಆತನು ನಮ್ಮನ್ನು ಎಂಥ ಭಯಂಕರಮರಣದಿಂದ ತಪ್ಪಿಸಿದನು; ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವವರಾಗಿ ಸಹಕಾರಿಗಳಾಗಿರುವದರಿಂದ ಆತನು ಇನ್ನು ಮೇಲೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿವಿುತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಮರಣದ ಈ ಮಹಾ ಅಪಾಯಗಳಿಂದ ದೇವರು ನಮ್ಮನ್ನು ರಕ್ಷಿಸಿದನು. ಮತ್ತು ಇನ್ನು ಮುಂದೆಯೂ ರಕ್ಷಿಸುವನು. ನಾವು ಆತನಲ್ಲಿ ಭರವಸೆ ಇಟ್ಟಿದ್ದೇವೆ. ಆತನು ನಮ್ಮನ್ನು ಇನ್ನು ಮುಂದೆಯೂ ರಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾವು ಭರವಸೆಯಿಟ್ಟ ದೇವರು ಅಂಥಾ ಮರಣಕರ ಅಪಾಯದಿಂದ ನಮ್ಮನ್ನು ತಪ್ಪಿಸಿದ್ದಾರೆ ಮತ್ತು ಮುಂದೆಯೂ ಅಪಾಯಗಳಿಂದ ನಮ್ಮನ್ನು ಪಾರುಮಾಡುವರು. ಅಧ್ಯಾಯವನ್ನು ನೋಡಿ |