2 ಕೊರಿಂಥದವರಿಗೆ 10:12 - ದೆವಾಚಿ ಖರಿ ಖಬರ್12 ಅಪ್ನಾಚೆಚ್ ಮೊಟೆಪಾನ್ ಬೊಲ್ತ್ಯಾತ್ ತೆಂಚ್ಯಾ ಸರ್ಕೆ ಹೊವ್ಕ್ ನಾ ಹೊಲ್ಯಾರ್ ಅಮ್ಕಾಚ್ ತೆಂಚ್ಯಾ ಸಮಾಸಮಾ ಕರುಕ್ ಅಮ್ಕಾ ಧೈರೊ ಪಾವಿನಾ. ಅಪ್ನಿ ಮೊಟೆ ಮನುನ್ ಚಿಂತುನ್ ನಾಹೊಲ್ಯಾರ್ ಎಕಾಮೆಕಾಕ್ ಸಮಾ ಕರುನ್ ತೆನಿ ಅಪ್ಲೆಚ್ ಪಿಶೆಪಾನ್ ದಾಕ್ವುತ್ಯಾತ್ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವುದಕ್ಕಾಗಲಿ ಅವರೊಂದಿಗೆ ಹೋಲಿಸುವುದಕ್ಕಾಗಲಿ ನಾನು ಇಷ್ಟಪಡುವುದಿಲ್ಲ. ಅವರಂತೂ ತಮ್ಮತಮ್ಮೊಳಗೆ ತಮ್ಮನ್ನು ಅಳತೆಮಾಡಿಕೊಂಡು ತಮ್ಮನ್ನು ತಮಗೇ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕೆಲವರು ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾರೆ. ಅವರಂತೆ ಕೊಚ್ಚಿಕೊಳ್ಳುವುದಕ್ಕೂ ಅವರೊಡನೆ ಹೋಲಿಸಿಕೊಳ್ಳುವುದಕ್ಕೂ ನಾವು ಯತ್ನಿಸುವುದಿಲ್ಲ. ಅವರಿಗೆ ತಾವು ಹಾಕಿಕೊಂಡದ್ದೇ ಅಳತೆಗೋಲು. ತಮಗೆ ತಾವೇ ತಾಳೆಹಾಕಿಕೊಳ್ಳುವಂಥ ಅವಿವೇಕಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವದಕ್ಕಾಗಲಿ ಅವರಿಗೆ ಹೋಲಿಸಿಕೊಳ್ಳುವದಕ್ಕಾಗಲಿ ನಮಗೆ ಧೈರ್ಯಸಾಲದು; ಅವರಂತೂ ತಮ್ಮ ತಮ್ಮೊಳಗೆ ತಮ್ಮನ್ನು ಅಳತೆಮಾಡಿಕೊಂಡು ತಮತಮಗೆ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತಾವು ಬಹಳ ಪ್ರಾಮುಖ್ಯವಾದವರೆಂದು ಯೋಚಿಸುವ ಆ ಜನರ ಗುಂಪಿನೊಡನೆ ಸೇರಿಕೊಳ್ಳಲು ನಮಗೆ ಧೈರ್ಯಸಾಲದು. ನಾವು ನಮ್ಮನ್ನು ಅವರೊಂದಿಗೆ ಹೋಲಿಸಿಕೊಳ್ಳುವುದಿಲ್ಲ. ಅವರು ತಮ್ಮನ್ನು ಇತರರೊಂದಿಗೆ ಹೋಲಿಸಿಕೊಳ್ಳುತ್ತಾರೆ; ತಮ್ಮನ್ನು ತಾವೇ ಮೌಲ್ಯಮಾಪನ ಮಾಡಿಕೊಳ್ಳುತ್ತಾರೆ. ಅವರಿಗೆ ಏನೂ ಗೊತ್ತಿಲ್ಲವೆಂದು ಇದೇ ತೋರಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ತಮ್ಮನ್ನು ತಾವೇ ಹೊಗಳಿಕೊಳ್ಳುವವರೊಂದಿಗೆ ನಾವು ಹೋಲಿಸಿಕೊಳ್ಳಲು ಯತ್ನಿಸುವುದಿಲ್ಲ. ಏಕೆಂದರೆ, ಅವರು ತಮ್ಮತಮ್ಮೊಳಗೆ ತಮ್ಮನ್ನು ಅಳತೆ ಮಾಡಿಕೊಂಡು ಒಬ್ಬರೊಂದಿಗೊಬ್ಬರು ಹೋಲಿಸಿಕೊಳ್ಳುವುದರಿಂದ ವಿವೇಕವಿಲ್ಲದವರಾಗಿರುತ್ತಾರೆ. ಅಧ್ಯಾಯವನ್ನು ನೋಡಿ |