2 ಕೊರಿಂಥದವರಿಗೆ 12:13 - ದೆವಾಚಿ ಖರಿ ಖಬರ್13 ಮಾಜ್ಯಾ ಗರ್ಜಾ ಪುರಾ ಕರ್‍ತಲೆ ಎಕ್ ವಜ್ಜೆ ಮಿಯಾ ತುಮ್ಚ್ಯಾ ವರ್‍ತಿ ಘಾಲುಕ್ ನಾ, ಕಸ್ಲ್ಯಾಬಿ ಸಂಗ್ತಿಯಾತ್ನಿ ತುಮಿ ದುಸ್ರ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಂಚ್ಯಾನ್ಕಿ ಕಮಿ ಪರಿಸ್ಥಿತಿ ಕಾಯ್? ಮಿಯಾ ಕರಲ್ಲೊ ಹ್ಯೊ ಅನ್ನ್ಯಾಯ್ ಮಾಕಾ ಮಾಪ್ ಕರಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನನ್ನು ಸಂರಕ್ಷಿಸುವ ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬುವ ಒಂದೇ ವಿಷಯದಲ್ಲಿ ಹೊರತು ಇನ್ಯಾವ ವಿಷಯದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆಮಾಡಿಲ್ಲವಲ್ಲಾ? ನನ್ನ ಈ ತಪ್ಪನ್ನು ಕ್ಷಮಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನನ್ನ ಜೀವನಾಂಶದ ಹೊಣೆಯನ್ನು ನಾನು ನಿಮ್ಮ ಮೇಲೆ ಹೊರಿಸಲಿಲ್ಲ. ಇದೊಂದನ್ನು ಬಿಟ್ಟರೆ ಯಾವ ವಿಷಯದಲ್ಲೂ ನಿಮ್ಮನ್ನು ಮಿಕ್ಕ ಸಭೆಗಳಿಗಿಂತ ಕೀಳಾಗಿ ಕಾಣಲಿಲ್ಲ. ಈ ಒಂದು ಅನ್ಯಾಯಕ್ಕಾಗಿ ನನ್ನನ್ನು ಕ್ಷಮಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನನ್ನು ಸಂರಕ್ಷಿಸುವ ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬುವ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯದಲ್ಲಿಯೂ ನಿಮ್ಮನ್ನು ವಿುಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ. ನಾನು ಮಾಡಿದ ಈ ಅನ್ಯಾಯವನ್ನು ಕ್ಷವಿುಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನು ಈ ಕಾರ್ಯಗಳನ್ನು ಬಹು ತಾಳ್ಮೆಯಿಂದ ಮಾಡಿದೆನು. ಆದ್ದರಿಂದ ಇತರ ಸಭೆಗಳಿಗೆ ದೊರೆತವುಗಳೆಲ್ಲ ನಿಮಗೂ ದೊರೆತವು. ಒಂದೇ ಒಂದು ವ್ಯತ್ಯಾಸವೇನೆಂದರೆ, ನಾನು ನಿಮಗೆ ಭಾರವಾಗಿರಲಿಲ್ಲ. ಈ ವಿಷಯದಲ್ಲಿ ನನ್ನನ್ನು ಕ್ಷಮಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ನಿಮಗೆ ಎಂದೂ ಭಾರವಾಗಿರಲಿಲ್ಲ ಎಂಬ ಒಂದೇ ವಿಷಯದಲ್ಲಿ ಹೊರತು, ಬೇರೆ ಯಾವ ವಿಷಯದಲ್ಲಿಯೂ ನಿಮ್ಮನ್ನು ಉಳಿದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲ. ಈ ನನ್ನ ತಪ್ಪನ್ನು ಕ್ಷಮಿಸಿರಿ. ಅಧ್ಯಾಯವನ್ನು ನೋಡಿ |