2 ಕೊರಿಂಥದವರಿಗೆ 12:2 - ದೆವಾಚಿ ಖರಿ ಖಬರ್2 ಕ್ರಿಸ್ತಾಚ್ಯಾ ಎಕ್ವಟ್ಟಾತ್ ಅಸಲ್ಲ್ಯಾ ಎಕ್ ಮಾನ್ಸಾಕ್ ಮಿಯಾ ವಳಕ್ತಾ ಚೆವ್ದಾ ವರ್ಸಾಂಚ್ಯಾ ಅದ್ದಿ ತೆಕಾ ತಿನ್ವ್ಯಾ ಸರ್‍ಗಾರ್ ವೊಡುನ್ ಘೆವ್ನ್ ಹೊಲ್ಲೆ. ಹೆ ಆಂಗಾ ಸಮೆತ್ ಹೊಲೆ ಕಾಯ್ ಆಂಗ್ ನಸ್ತಾನಾಚ್ ಹೊಲೆ ತೆ ಮಾಕಾ ಗೊತ್ತ್ ನಾ; ತೆ ದೆವಾಕುಚ್ ಗೊತ್ತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು. ಅವನು ಹದಿನಾಲ್ಕು ವರ್ಷಗಳ ಹಿಂದೆ ಮೂರನೆಯ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ, ಅಥವಾ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆನು, ದೇವರೇ ಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕ್ರೈಸ್ತನಾದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆ. ಅವನು ಹದಿನಾಲ್ಕು ವರ್ಷಗಳಿಗೆ ಹಿಂದೆ ಮಹೋನ್ನತ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ದೇಹಸಹಿತನಾಗಿಯೋ ದೇಹರಹಿತನಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೆಯ ಆಕಾಶದ ಪರಿಯಂತರಕ್ಕೂ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆ, ದೇವರೇ ಬಲ್ಲನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮೂರನೆಯ ಆಕಾಶಕ್ಕೆ ಒಯ್ಯಲ್ಪಟ್ಟಿದ್ದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆನು. ಇದು ಸಂಭವಿಸಿ ಹದಿನಾಲ್ಕು ವರ್ಷಗಳಾದವು. ಆ ವ್ಯಕ್ತಿಯು ದೇಹಸಹಿತವಾಗಿ ಹೋಗಿದ್ದನೊ ಅಥವಾ ದೇಹರಹಿತನಾಗಿ ಹೋಗಿದ್ದನೊ ನನಗೆ ಗೊತ್ತಿಲ್ಲ. ದೇವರಿಗೆ ಗೊತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಕ್ರಿಸ್ತ ಯೇಸುವಿನಲ್ಲಿ ಒಬ್ಬನನ್ನು ನಾನು ಬಲ್ಲೆನು. ಹದಿನಾಲ್ಕು ವರ್ಷಗಳ ಹಿಂದೆ ನಾನು ಮೂರನೆಯ ಸ್ವರ್ಗಕ್ಕೆ ಒಯ್ಯಲಾದೆನು. ನಾನು ದೇಹ ಸಹಿತವಾಗಿ ಹೋದೆನೋ, ದೇಹ ರಹಿತನಾಗಿ ಹೋದೆನೋ ನನಗೆ ಗೊತ್ತಿಲ್ಲ ದೇವರಿಗೇ ಗೊತ್ತು. ಅಧ್ಯಾಯವನ್ನು ನೋಡಿ |