2 ಕೊರಿಂಥದವರಿಗೆ 13:10 - ದೆವಾಚಿ ಖರಿ ಖಬರ್10 ಹೆಚ್ಯಾಸಾಟ್ನಿ ಧುರ್ ಹೊತ್ತ್ಯಾ ತನ್ನಾಚ್ ಹೆ ಸಗ್ಳೆ ಲಿವ್ಕ್ ಮಿಯಾ ಅಶಾ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಮಿಯಾ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ಮಾಜೊ ಅಧಿಕಾರ್ ವಾಪ್ರುನ್ ತುಮ್ಕಾ ಕಟಿನ್ ರಿತಿನ್ ಚಾಲ್ವುತಲೊ ಅವ್ಕಾಸ್ ಮಾಕಾ ಗಾವ್ತಲೊ ನಕ್ಕೊ ಮನ್ತಲಿಚ್ ಮಾಜಿ ಆಶಾ. ಹ್ಯೊ ಅಧಿಕಾರ್ ಧನಿಯಾನುಚ್ ಮಾಕಾ ದಿಲ್ಲೊ ಹಾಯ್ ಕೊಸ್ಳುನ್ ಘಾಲುಕ್ ನ್ಹಯ್, ಭಾಂದುನ್ಗೆತ್ ಹಾನುಕ್ ಮನುನ್ ತೊ ಮಾಕಾ ದಿಲ್ಲೊ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದ್ದರಿಂದಲೇ ನಿಮ್ಮ ಬಳಿಗೆ ಬರುವುದಕ್ಕೆ ಮುಂಚೆಯೇ ಇದನ್ನೆಲ್ಲಾ ಬರೆಯುತ್ತಿದ್ದೇನೆ. ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿಯೇ ಪ್ರಭು ನನಗೆ ಅಧಿಕಾರವನ್ನು ಕೊಟ್ಟಿರುವುದು. ಎಂದೇ, ನಿಮ್ಮ ಮಧ್ಯೆ ಬಂದಾಗ ಅಧಿಕಾರ ಪ್ರಯೋಗಿಸಿ ಕಠಿಣವಾಗಿ ವರ್ತಿಸಲು ಅವಕಾಶವಿರಬಾರದೆಂಬುದೇ ನನ್ನ ಅಪೇಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ. ನಿಮ್ಮನ್ನು ಕೆಡವಿಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾನು ನಿಮ್ಮೊಂದಿಗೆ ಇಲ್ಲದಿರುವಾಗ ಈ ಸಂಗತಿಗಳನ್ನು ಬರೆಯುತ್ತಿದ್ದೇನೆ. ಏಕೆಂದರೆ ನಾನು ಬಂದಾಗ ನಿಮ್ಮನ್ನು ದಂಡಿಸುವುದಕ್ಕಾಗಿ ನನ್ನ ಅಧಿಕಾರವನ್ನು ಉಪಯೋಗಿಸುವ ಅಗತ್ಯವಿರುವುದಿಲ್ಲ. ಪ್ರಭುವು ನನಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಬಲಗೊಳಿಸುವುದಕ್ಕಾಗಿಯೇ ಹೊರತು ನಾಶಮಾಡುವುದಕ್ಕಾಗಿಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ, ಈ ಮಾತುಗಳನ್ನು ಬರೆದಿದ್ದೇನೆ. ನಾನು ಬಂದಾಗ ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ ಆದರೆ ಕಟ್ಟುವುದಕ್ಕಾಗಿ ಕರ್ತ ಯೇಸು ನನಗೆ ಕೊಟ್ಟಿರುವ ಅಧಿಕಾರದಿಂದ ನಿಮಗೆ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿ |