2 ಕೊರಿಂಥದವರಿಗೆ 4:7 - ದೆವಾಚಿ ಖರಿ ಖಬರ್7 ಅನಿ ಅಶೆ, ಸಾಂಗುಕ್ ಹೊಯ್ನಾ ತಸ್ಲಿ ಪದ್ವಿ ಅಮ್ಚ್ಯಾತ್ನಾ ನ್ಹಯ್, ದೆವಾಕ್ನಾ ಯೆತಾ ಮನುನ್ ದಾಕ್ವುನ್ ದಿವ್‍ಸಾಟಿ ಹೆ ಬದಿಕ್ ಅಮಿ ಮಾಟಿಚ್ಯಾ ಆಯ್ದಾನಾತ್ನಿ ವಾವುನ್ ಘೆವ್ನ್ ಹಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಬಲಾಧಿಕ್ಯವು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂದು ತೋರುವದಕ್ಕಾಗಿ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಮಗೆ ಈ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೋ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಈ ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ. ಅಧ್ಯಾಯವನ್ನು ನೋಡಿ |