2 ಕೊರಿಂಥದವರಿಗೆ 5:4 - ದೆವಾಚಿ ಖರಿ ಖಬರ್4 ಹ್ಯಾ ಜಗಾಚ್ಯಾ ಬಿರಾಡಾತ್ ರ್‍ಹಾತಾನಾ, ಅಮಿ ಉಸ್ಕಾರ್ತಾವ್ ಅನಿ ಚಿಂತೆನ್ ಭರುನ್ ರ್‍ಹಾತಾಂವ್. ಜಾಲ್ಯಾರ್ಬಿ ಅಮ್ಕಾ ಆಮ್ಚೆ ಆಂಗ್ ನಾಗ್ಡೆ ಕರಲ್ಲೆ ಬಗುಕ್ ನಕ್ಕೊ; ಅಮ್ಚ್ಯಾ ವರ್‍ತಿ ನ್ಹವೆ ನೆಸಾಪ್ ನೆಸುಕ್ ಮಟ್ಲ್ಯಾರ್ ಸರ್ಗಾಚೆ ನೆಸಾಪ್, ತೆ ನಾಸ್ ಹೊತಲೆ ಬದ್ಲುನ್ ಶಾಶ್ವತ್ ಜಿವನ್ ಹೊವ್ನ್ ಬದಲ್ತಾ, ತೆ ನೆಸುಚೆ ಮನ್ತಲಿಚ್ ಅಮ್ಚಿ ಆಶಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಏಕೆಂದರೆ, ಈ ದೇಹವೆಂಬ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ; ಬದಲಾಗಿ ಅದರ ಮೇಲೆ ಧರಿಸಿಕೊಳ್ಳಬೇಕೆಂಬುದೇ. ಆದ್ದರಿಂದ ನಶ್ವರವಾದದ್ದು ಅಳಿದುಹೋಗಿ ಅಮರವಾದದ್ದು ಉಳಿಯುವಂತೆ ಅಪೇಕ್ಷಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ. ನಶ್ವರವಾದುದು ನುಂಗಿಹೋಗಿ ಅಮರವಾದುದು ಉಳಿಯಬೇಕೆಂದೇ ಈ ಗು಼ಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಲು ಅಪೇಕ್ಷಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಈ ಗುಡಾರದಲ್ಲಿರುವವರಾದ ನಾವು ಭಾರ ಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿ ಹೋಗಬೇಕೆಂದು ನಮ್ಮ ಇಷ್ಟವಲ್ಲ; ಮರ್ತ್ಯವಾದದ್ದು ನುಂಗಿಹೋಗಿ ಜೀವವೊಂದೇ ಉಳಿಯುವಂತೆ ಈ ಗುಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಬೇಕೆಂಬದೇ ನಮ್ಮ ಇಷ್ಟ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಈ ಗುಡಾರದಲ್ಲಿರುವ ತನಕ ನಮಗೆ ಭಾರವಾದ ಹೊರೆಗಳಿವೆ ಮತ್ತು ನಾವು ನರಳುತ್ತೇವೆ. ಬೆತ್ತಲೆಯಾಗಿರಲು ನಾವು ಇಷ್ಟಪಡದೆ ಪರಲೋಕದ ಮನೆಯನ್ನು ಧರಿಸಿಕೊಳ್ಳಲು ಇಷ್ಟಪಡುತ್ತೇವೆ. ಸತ್ತುಹೋಗುವ ಈ ದೇಹವನ್ನು ಜೀವವು ಪೂರ್ಣವಾಗಿ ಆವರಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ಗುಡಾರವೆಂಬ ಹಳೆಯ ಶರೀರವು ನಮ್ಮಿಂದ ಕಳಚಿ ಹೋಗಬೇಕೆಂಬುದು ನಮ್ಮ ಇಷ್ಟವಲ್ಲ. ಆದರೆ ಪರಲೋಕದ ನಿವಾಸವೆಂಬ ನೂತನ ಶರೀರವನ್ನು ನಾವು ಧರಿಸಿಕೊಳ್ಳಲು ಬಯಸುತ್ತೇವೆ. ಏಕೆಂದರೆ ನಶ್ವರವಾದ ಈ ನಮ್ಮ ದೇಹವು ಅಮರತ್ವವನ್ನು ಧರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |