2 ಕೊರಿಂಥದವರಿಗೆ 8:10 - ದೆವಾಚಿ ಖರಿ ಖಬರ್10 ಹ್ಯಾ ಸಂಗ್ತಿಚ್ಯಾ ವಿಶಯಾತ್ ಮಿಯಾ ತುಮ್ಕಾ ಎಕ್ ಬುದ್ದ್ ಸಾಂಗ್ತಲೆ ತುಮ್ಚ್ಯಾ ಬರ್‍ಯಾಕ್ ಪಡ್ತಾ. ಎಕ್ ವರ್ಸಾಚ್ಯಾ ಅದ್ದಿ ತುಮಿಚ್ ಹೆ ಕಾಮ್ ಸುರು ಕರಲ್ಲ್ಯಾಸಿ, ತೆಬಿ ತುಮ್ಚ್ಯಾ ಎವ್ಡ್ಯಾಕ್ ತುಮಿಚ್ ಸುರು ಕರಲ್ಲ್ಯಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಈ ಧರ್ಮಕಾರ್ಯವನ್ನು ಕುರಿತ ನನ್ನ ಸಲಹೆಯನ್ನು ತಿಳಿಸುತ್ತೇನೆ, ಇದು ನಿಮ್ಮ ಸಹಾಯಕ್ಕೆ; ಈ ಕಾರ್ಯವನ್ನು ಒಂದು ವರ್ಷದ ಹಿಂದೆ ನಡೆಸುವುದಕ್ಕೆ ಪ್ರಾರಂಭಿಸಿದ ನೀವು, ಮುಂದುವರಿಯಲು ಮನಸ್ಸು ಮಾಡಿದ ಹಾಗೆಯೇ ಅದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ವಿಷಯದಲ್ಲಿ ನನ್ನ ಸಲಹೆ ಏನೆಂದರೆ : ಒಂದು ವರ್ಷಕ್ಕೆ ಹಿಂದೆ ನೀವು ಪ್ರಾರಂಭಿಸಿದ ಈ ಸೇವಾಕಾರ್ಯವನ್ನು ಪೂರೈಸುವುದು ಲೇಸು. ಈ ಕಾರ್ಯವನ್ನು ಮೊದಲು ಆರಂಭಿಸಿದವರು ನೀವೇ. ಆರಂಭಿಸಬೇಕೆಂದು ಸೂಚಿಸಿದವರೂ ನೀವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಈ ಧರ್ಮಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಈ ಕಾರ್ಯವನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ನಡಿಸಬೇಕೆಂದು ಮನಸ್ಸು ಮಾಡುವದರಲ್ಲಿಯೂ ನೀವು ಅವರಿಗಿಂತ ಮೊದಲಿನವರಾದದರಿಂದ ನಮಗೆ ಅಷ್ಟು ಮಾತ್ರ ಹೇಳುವದು ವಿಹಿತವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾನು ನಿಮಗೆ ಹೇಳುವುದೇನೆಂದರೆ: ಕಳೆದ ವರ್ಷ ಕೊಡುವುದರಲ್ಲಿ ನೀವೇ ಮೊದಲಿಗರಾಗಿದ್ದಿರಿ ಮತ್ತು ಮೊಟ್ಟಮೊದಲನೆಯದಾಗಿ ಕೊಟ್ಟವರು ನೀವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಈ ವಿಷಯದಲ್ಲಿ ನನ್ನ ಸಲಹೆ ಏನೆಂದರೆ, ಕಳೆದ ವರ್ಷದಲ್ಲಿ ಮೊದಲು ನೀವೇ ಈ ಕಾರ್ಯವನ್ನು ಪ್ರಾರಂಭಿಸಿದ್ದಲ್ಲದೇ ಇದನ್ನು ಮಾಡಬೇಕೆಂದು ಬಯಸಿದ್ದೀರಿ. ಅಧ್ಯಾಯವನ್ನು ನೋಡಿ |