2 ಕೊರಿಂಥದವರಿಗೆ 8:14 - ದೆವಾಚಿ ಖರಿ ಖಬರ್14 ಅತ್ತಾ ತುಮ್ಚ್ಯಾಕ್ಡೆ ಕಾಯ್ ಜಾಸ್ತಿಚೆ ಹಾಯ್ ತೆ ತುಮಿ ತೆಂಚ್ಯಾ ಗರ್ಜೆಕ್ ದಿವ್ಚೆ, ತಸೆಚ್ ಎಕ್ ದಿಸ್ ತೆನಿ ಅಪ್ನಾಕ್ಡೆ ಜಾಸ್ತಿ ಹೊತ್ತೆ ದಿವ್ನ್ ತುಮ್ಚ್ಯಾ ಗರ್ಜೆಕ್ ಪಾವ್ತ್ಯಾತ್, ಅಸೆ ಎಕಾಮೆಕಾಚ್ಯಾ ಪಾಯ್ದ್ಯಾಕ್ ಪಡಿ ಸರ್ಕೆ ಹೊತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸಮಾನತ್ವ ಇರಬೇಕೆಂಬುದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆಯನ್ನು ನೀಗಿಸುತ್ತದೆ. ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವುದಕ್ಕೆ ಅನುಕೂಲವಾಗುವುದು. ಹೀಗೆ ಸಮಾನತ್ವವುಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಈ ಕಾಲದಲ್ಲಿ ನಿಮಗೆ ಸಮೃದ್ಧಿಯಾಗಿರುವುದರಿಂದ ಅವರ ಕೊರತೆಯನ್ನು ನೀವು ನೀಗಿಸಬೇಕು. ಮುಂದಕ್ಕೆ ಅವರು ಸಮೃದ್ಧಿಯಿಂದಿರುವಾಗ, ನಿಮ್ಮ ಕೊರತೆಯನ್ನು ಅವರು ನೀಗಿಸುವರು. ಹೀಗೆ ನಿಮ್ಮಲ್ಲಿ ಸಮಾನತೆ ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸಮಾನತ್ವವಿರಬೇಕೆಂಬದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆಯನ್ನು ನೀಗಿಸುತ್ತದೆ. ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಈಗ ನಿಮ್ಮಲ್ಲಿ ಬೇಕಾದಷ್ಟಿದೆ. ನಿಮ್ಮ ಈ ಸಮೃದ್ಧಿಯು ಇತರ ಜನರ ಕೊರತೆಯನ್ನು ನೀಗಿಸುವುದು. ಬಳಿಕ, ಅವರು ಸಮೃದ್ಧರಾಗಿರುವಾಗ ನಿಮ್ಮ ಕೊರತೆಯನ್ನು ನೀಗಿಸುವರು. ಹೀಗೆ ಎಲ್ಲರೂ ಸಮಾನರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಸದ್ಯದಲ್ಲಿ ನಿಮ್ಮ ಸಮೃದ್ಧಿಯು ಅವರ ಕೊರತೆಯನ್ನು ನೀಗಿಸುವುದು. ಅನಂತರ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವುದು. ಆಗ ಸಮಾನತೆಯ ಗುರಿಯು ಉಂಟಾಗುವುದು. ಅಧ್ಯಾಯವನ್ನು ನೋಡಿ |