2 ಕೊರಿಂಥದವರಿಗೆ 9:13 - ದೆವಾಚಿ ಖರಿ ಖಬರ್13 ಹ್ಯಾ ಪ್ರೆಮಾಚ್ಯಾ ಸೆವೆಚ್ಯಾ ವೈನಾ ತುಮ್ಚೊ ವಿಶ್ವಾಸ್ ಕಸ್ಲೊ ಮನುನ್ ತುಮಿ ದಾಕ್ವುನ್ ದಿತ್ಯಾಶಿ. ಮಟ್ಲ್ಯಾರ್ ಕ್ರಿಸ್ತಾಚಿ ಬರಿ ಖಬರ್ ತುಮಿ ಮಾನುನ್ ಘೆತ್ಯಾಶಿ, ತಶೆಚ್ ಪಾಳ್ತಾಶಿ ಮನುನ್ ಅನಿ ತುಮ್ಚ್ಯಾಕ್ಡೆ ಕಾಯ್ ಹಾಯ್ ತೆ ತೆಂಕಾಬಿ ಅನಿ ದುಸ್ರ್ಯಾಕ್ನಿಬಿ ಸಗ್ಳ್ಯಾ ಮನಾನ್ ತುಮಿ ವಾಟುನ್ ದಿತ್ಯಾಶಿ ಮನುನ್ ಕಳ್ವುನ್ ಘೆವ್ನ್ ದೆವಾಕ್ ಧನ್ಯವಾದ್ ದಿತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು ದೇವರನ್ನು ಕೊಂಡಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕ್ರಿಸ್ತಯೇಸುವಿನ ಶುಭಸಂದೇಶದ ಅಂಗೀಕಾರದಿಂದ ನೀವು ಎಷ್ಟು ನಿಷ್ಠಾವಂತ ಸೇವಾಸಕ್ತರಾಗಿದ್ದೀರಿ, ತಮಗೂ ಇತರರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂದು ತಿಳಿದು ಅನೇಕರು ದೇವರನ್ನು ಕೊಂಡಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಈ ಸಹಾಯದಿಂದ ತೋರಿಬಂದ ನಿಮ್ಮ ಯೋಗ್ಯಭಾವವನ್ನು ಅವರು ನೋಡುವಾಗ ನೀವು ಮಾಡಿದ್ದ ಪ್ರತಿಜ್ಞೆಗೆ ಸರಿಯಾಗಿ ಕ್ರಿಸ್ತನ ಸುವಾರ್ತೆಯನ್ನು ಅನುಸರಿಸಿದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀವು ಮಾಡುವ ಈ ಸೇವಾಕಾರ್ಯವು ನಿಮ್ಮ ನಂಬಿಕೆಗೆ ಸಾಕ್ಷಿಯಾಗಿದೆ. ಇದರ ನಿಮಿತ್ತವಾಗಿ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಕ್ರಿಸ್ತನ ಸುವಾರ್ತೆಯನ್ನು ಅನುಸರಿಸುವುದರಿಂದ ಅವರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಹೇಳುವ ಸುವಾರ್ತೆಯನ್ನು ನೀವು ನಂಬಿದ್ದೀರಿ. ತಮ್ಮೊಂದಿಗೆ ಮತ್ತು ಎಲ್ಲರೊಂದಿಗೆ ನೀವು ಉದಾರವಾಗಿ ಹಂಚಿಕೊಂಡಿದ್ದರಿಂದ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಮ್ಮ ಸ್ವಭಾವವನ್ನು ರುಜುಪಡಿಸಿದ ಈ ಸೇವೆಯ ನಿಮಿತ್ತವಾಗಿಯೂ, ಕ್ರಿಸ್ತ ಯೇಸುವಿನ ಸುವಾರ್ತೆಯ ಅರಿಕೆಯನ್ನು ಅನುಸರಿಸುವ ನಿಮ್ಮ ವಿಧೇಯತೆಗಾಗಿಯೂ ಇತರರು ದೇವರನ್ನು ಸ್ತುತಿಸುವರು. ಹೀಗೆ, ನೀವು ಅವರಿಗೂ ಪ್ರತಿಯೊಬ್ಬರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂಬುದನ್ನು ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿ |