2 ತಿಮೊಥೆಯನಿಗೆ 1:6 - ದೆವಾಚಿ ಖರಿ ಖಬರ್6 ಹೆಚೆಸಾಟ್ನಿ ಮಿಯಾ ತುಜ್ಯಾ ಟಕ್ಲ್ಯಾ ವರ್‍ತಿ ಹಾತಾ ಥವಲ್ಲ್ಯಾ ತನ್ನಾ ದೆವಾನ್ ತುಕಾ ದಿಲ್ಲೆ ವರು, ದಿವೊ ಸರ್ಕೆ ಪೆಟುನ್ಗೆತ್ ರ್‍ಹಾಂವ್ದಿತ್. ತೆ ತುಕಾ ಗಾವಲ್ಲೆ ಮಿಯಾ ತುಜಾ ವೈರ್ ಹಾತ್ ಥವಲ್ಲೆ ತನ್ನಾಚ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕಕೊಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರು ನಿನಗೆ ದಯಪಾಲಿಸಿರುವ ವರವನ್ನು ನೀನು ನೆನಪು ಮಾಡಿಕೊಳ್ಳಬೇಕೆಂದು ನಾನು ಅಪೇಕ್ಷಿಸುವುದು ಈ ಕಾರಣದಿಂದಲೇ. ನಾನು ನನ್ನ ಕೈಗಳನ್ನು ನಿನ್ನ ಮೇಲಿಟ್ಟಾಗ ಆತನು ನಿನಗೆ ಆ ವರವನ್ನು ದಯಪಾಲಿಸಿದನು. ಬೆಂಕಿಯ ಕಿಡಿಯು ಪ್ರಜ್ವಲವಾಗಿ ದಟ್ಟವಾದ ಬೆಂಕಿಯಾಗುವಂತೆ ನಿನ್ನ ವರವನ್ನು ಉಪಯೋಗಿಸುತ್ತಾ ಅದನ್ನು ಅಧಿಕಗೊಳಿಸಬೇಕೆಂಬುದು ನನ್ನ ಅಪೇಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತಗಳನ್ನು ಇಟ್ಟಿದ್ದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ. ಅಧ್ಯಾಯವನ್ನು ನೋಡಿ |