2 ಥೆಸಲೋನಿಕದವರಿಗೆ 1:12 - ದೆವಾಚಿ ಖರಿ ಖಬರ್12 ಅಶೆ ಅಮ್ಚ್ಯಾ ಧನಿಯಾ ಜೆಜುಚ್ಯಾ ನಾವಾಕ್ ತುಮ್ಚ್ಯಾ ವೈನಾ ಮಹಿಮಾ ಗಾವುಂದಿತ್, ಅನಿ ಅಮ್ಚ್ಯಾ ದೆವಾಚ್ಯಾ ಅನಿ ಧನಿಯಾ ಜೆಜು ಕ್ರಿಸ್ತಾಚ್ಯಾ ಕುರ್ಪೆ ವೈನಾ ತುಮ್ಕಾ ಮಹಿಮಾ ಗಾವುಂದಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗಿರಲಾಗಿ ನಮ್ಮ ದೇವರು ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗೆ ಅನುಸಾರವಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವುದು ನೀವೂ ಆತನಲ್ಲಿ ಮಹಿಮೆ ಹೊಂದುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗೆ ನಿಮ್ಮ ಮುಖಾಂತರ ಪ್ರಭು ಯೇಸುವಿನ ನಾಮಕ್ಕೂ ಮತ್ತು ಅವರಲ್ಲಿ ನಿಮಗೂ ಮಹಿಮೆಯುಂಟಾಗಲಿ. ನಮ್ಮ ದೇವರ ಹಾಗು ಪ್ರಭು ಯೇಸುಕ್ರಿಸ್ತರ ಅನುಗ್ರಹದಿಂದ ಇದು ನೆರವೇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದ ನಿಮ್ಮ ಮೂಲಕ ನಮ್ಮ ಕರ್ತನಾದ ಯೇಸುವಿನ ಹೆಸರಿಗೆ ಮಹಿಮೆ ಉಂಟಾಗುವದು; ಆತನ ಮೂಲಕ ನಿಮಗೂ ಮಹಿಮೆ ಉಂಟಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದಲೆಂದು ಮತ್ತು ನೀವೂ ಆತನಲ್ಲಿ ಮಹಿಮೆ ಹೊಂದಲೆಂದು ನಾವು ಪ್ರಾರ್ಥಿಸುತ್ತೇವೆ. ಆ ಮಹಿಮೆಯು ನಮ್ಮ ದೇವರ ಮತ್ತು ಪ್ರಭು ಯೇಸು ಕ್ರಿಸ್ತನ ಕೃಪೆಯಿಂದ ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಮ್ಮ ದೇವರ ಹಾಗೂ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯ ಅನುಸಾರವಾಗಿ, ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದಬೇಕು. ಮಾತ್ರವಲ್ಲದೇ ನೀವು ಕೂಡಾ ಅವರಲ್ಲಿ ಮಹಿಮೆ ಹೊಂದಬೇಕು ಎಂದು ಬೇಡಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿ |