2 ಪೇತ್ರನು 3:4 - ದೆವಾಚಿ ಖರಿ ಖಬರ್4 ಅನಿ “ತೆನಿ ಅನಿ ಪರ್ತುನ್ ಯೆತಾ ಮನುನ್ ಗೊಸ್ಟ್ ದಿಲ್ಯಾನ್, ತೊ ಅತ್ತಾ ಖೈಯ್ ಹಾಯ್ ? ಅಮ್ಚಿ ವಾಡ್ ವಡ್ಲಾ ಮರುನ್ ಗೆಲಿ, ಖರೆ ಹ್ಯೊ ಜಗ್ ಅದ್ದಿಸ್ನಾ ಹೊತ್ತ್ಯಾ ಸಾರ್ಕೆಚ್ ಹಾಯ್” ಮನುನ್ ತಿ ಲೊಕಾ ಸಾಂಗ್ತಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?” ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇವರು ತಮ್ಮ ದುರಾಶೆಗಳಿಗೆ ಬಲಿಯಾಗಿ, “ಆತನು ಮರಳಿ ಬರುವನು ಎಂಬ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ಮೃತರಾದರು; ಅಂದಿನಿಂದ ಸಮಸ್ತವೂ ಲೋಕಾದಿಯಿಂದಲೂ ಇದ್ದ ಹಾಗೆಯೇ ಇದೆಯಲ್ಲಾ,” ಎಂದು ಅಪಹಾಸ್ಯಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ನಿದ್ರೆ ಹೊಂದಿದ ದಿನ ಮೊದಲುಗೊಂಡು ಸಮಸ್ತವೂ ಲೋಕಾದಿಯಿಂದಿದ್ದ ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ಜನರು, “ಆತನು ಮತ್ತೆ ಬರುವುದಾಗಿ ವಾಗ್ದಾನ ಮಾಡಿದ್ದನು. ಆತನು ಎಲ್ಲಿದ್ದಾನೆ? ನಮ್ಮ ಪಿತೃಗಳು ಸತ್ತುಹೋದರು. ಆದರೆ ಈ ಲೋಕವು ಆದಿಯಿಂದಲೂ ಇದ್ದ ರೀತಿಯಲ್ಲಿಯೇ ಇದೆ” ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ?” ಎಂದು ಕುಚೋದ್ಯದಿಂದ ಕೇಳುವರೆಂದು ನೀವು ಮೊದಲು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |